ಮೇ 8ಕ್ಕೆ ರಾಷ್ಟ್ರೀಯ ಪಕ್ಷಗಳ ಬಣ್ಣ ಬಯಲು: ದಾದಾಪೀರ
ಬ್ಯಾಡಗಿ: ರಾಷ್ಟ್ರೀಯ ಪಕ್ಷಗಳ ಹಗರಣಗಳ ಸರಮಾಲೆಗೆ ಬ್ರೇಕ್ ಹಾಕುವ ಮೂಲಕ ರಾಜ್ಯದ ಮತದಾರರು ಮೇ. 8 ರಂದು ಅವುಗಳ ಬಣ್ಣ ಬಯಲು ಮಾಡಲಿದ್ದಾರೆ ಎಂದು ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿ ದಾದಾಪೀರ್ ಭೂಸಿ ಭವಿಷ್ಯ ನುಡಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಕೆರೂಡಿ ಗ್ರಾಮದಲ್ಲಿ ಬಿಎಸ್ಸಾರ್ ಕಾಂಗ್ರೆಸ್‌ನ ಚುನಾವಣೆ ಪ್ರಚಾರದಲ್ಲಿ ಅವರು ಮಾತನಾಡಿದರು.
ದೇಶದ ಆಸ್ತಿ ಲೂಟಿ: ಕೇಂದ್ರದಲ್ಲಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ, 2ಜಿ ಸ್ಪೆಕ್ಟ್ರಂ ಹಾಗೂ ಕಲ್ಲಿದ್ದಲು ಗಣಿ ಹಗರಣದಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಪಕ್ಷದ ನಾಯಕರು ಡಿನೋಟಿಫಿಕೇಶನ್ ಪ್ರಕರಣದಲ್ಲಿ ಸಿಲುಕಿದ್ದು, ದೇಶದ ಆದಾಯ ಹಾಗೂ ಆಸ್ತಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರಾದೇಶಿಕ ಪಕ್ಷಗಳ ನಿವಾರ್ಯತೆ ರಾಜ್ಯಕ್ಕಿದೆ. ಕಳೆದ 60 ವರ್ಷಗಳಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಜೀತದಾಳುವಿನಂತೆ ನೋಡಿಕೊಂಡಿದ್ದು, ಅಲ್ಪಂಖ್ಯಾತರಿಗೆ ಶಿಕ್ಷಣ, ಇನ್ನಿತರ ಸೌಳಭ್ಯಗಳನ್ನು ಒದಗಿಸಿದ ಕಾಂಗ್ರೆಸ್ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಆರೂವರೆ ಕೋಟಿ ಕನ್ನಡಿಗರ ಸೇವೆಗೆ ಸಿದ್ಧವಾಗಿರುವ ಬಿ. ಶ್ರೀರಾಮುಲು ಜನರಿಗೆ ಅನ್ಯಾಯವಾದಾಗ ಬೀದಿಗಿಳಿದು ಹೋರಾಟ ನಡೆಸುವ ಮೂಲಕ ಅವರ ರಕ್ಷಣೆ ಮಾಡಿದ್ದಾರೆ. ಹೀಗಾಗಿ ಈ ಬಾರಿ ರಾಜ್ಯದ ಮತದಾರರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದಲ್ಲಿ ಬಿಎಸ್ಸಾರ್‌ಗೆ ಉತ್ತಮ ಬೆಂಬಲ ದೊರೆಯುತ್ತಿದೆ. ಬ್ಯಾಡಗಿ ಕ್ಷೇತ್ರದಲ್ಲಿ ಬಿಎಸ್ಸಾರ್ ಗೆಲವು ನಿಶ್ಚಿತವೆಂದರು. ತಾಲೂಕು ಘಟಕದ ಅಧ್ಯಕ್ಷ ಮಲ್ಲೇಶಪ್ಪ ಡಂಬಳ, ಮುಖಂಡರಾದ ಅಬ್ಬು ದೊಡ್ಮನಿ, ಮೆಹಬೂಬ್ ಮಕಾಂದಾರ್, ಮಾಲತೇಶ್ ದೊಡ್ಮನಿ, ಜಗದೀಶ ಹರಿಜನ, ಮಹೇಶ ತಳವಾರ, ಕುಮಾರ ನಾಯ್ಕ್, ಇರ್ಫಾನ್ ನೀರಹಳ್ಳಿ, ಮಹ್ಮದ್ ರಫೀಕ್ ಭೂಷಿ, ಫಕ್ಕೀರಪ್ಪ ಕಳ್ಳಿಮನಿ, ಸುರೇಶ್ ದೇವನಳ್ಳಿ, ಚಿಕ್ಕಪ್ಪ ತಳವಾರ ಇನ್ನಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

