ಇಂದು ಬೊಮ್ಮಾಯಿ ನಾಮಪತ್ರ ಸಲ್ಲಿಕೆ
ಶಿಗ್ಗಾಂವಿ: ಶಿಗ್ಗಾಂವಿ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ನಾಮಪತ್ರವನ್ನು ಏ. 15ರಂದು ಸಲ್ಲಿಸುತ್ತೇನೆ. ಎಲ್ಲ ಸಮಾಜ, ಗ್ರಾಮದ ಪ್ರಮುಖರು, ಕೂಲಿಕಾರ್ಮಿಕರು ಭಾಗವಹಿಸಲು ಹೆಚ್ಚಿನ ಸಂಖ್ಯೆಯಲ್ಲಿ ಸ್ವಇಚ್ಛೆಯಿಂದ ಶಿಗ್ಗಾಂವಿಗೆ ಆಗಮಿಸಬೇಕು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ತಾಲೂಕಿನ ತಡಸ ಗ್ರಾಮದ ಘೋಡ್ಕೆ ಅವರ ಮನೆಯಲ್ಲಿ ಜರುಗಿದ ಸಭೆಯಲ್ಲಿ ಮಾತನಾಡಿದ ಸಚಿವರು, ತಡಸ ಗ್ರಾಮ ಹಿರಿದಾದ ಗ್ರಾಮವಾಗಿದ್ದು, ಅಲ್ಲದೆ ಮಲೆನಾಡು ಪ್ರದೇಶದಲ್ಲಿ ಇದ್ದುದರಿಂದ ಎಲ್ಲಾ ಸಮಾಜದ ಬಾಂಧವರು ತಮ್ಮ ಯಾವುದೇ ಸಮಸ್ಯೆಗಳನ್ನು ನಾವೇಲ್ಲರೂ ಕೂಡಿ ಕುಳಿತು ಬಗೆಹರಿಸೋಣ. ಒಂದಾಗಿ ಚುನಾವಣೆ ಎದುರಿಸೋಣ ಎಂದು ತಿಳಿಸಿದವರು. ಎಲ್ಲರೂ ಹೆಚ್ಚಿನ ಸಹಕಾರ, ಬೆಂಬಲ ಸಿಗುತ್ತಿದೆ ಎಂದರು. ತಾಪಂ ಮಾಜಿ ಸದಸ್ಯ ಕಿರಣ ಅವರಾದಿ, ಎಪಿಎಂಸಿ ಮಾಜಿ ಅಧ್ಯಕ್ಷ ಭರಮಗೌಡ್ರ ಪಾಟೀಲ, ಜಿ ಪಂ ಸದಸ್ಯರಾದ ಸಿ.ಎಸ್. ಪಾಟೀಲ, ಗ್ರಾಪಂ ಅಧ್ಯಕ್ಷ, ಸದಸ್ಯರು ವಿವಿಧ ಸಮಾಜದ ಭಾಂದವರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಅಂಬೇಡ್ಕರ್ ಜಯಂತಿ
ಶಿಗ್ಗಾಂವಿ: ತಾಲೂಕಾಡಳಿತ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ, ತಾಲೂಕಿನ ವಿವಿಧ ದಲಿತ ಒಕ್ಕೂಟಗಳ ಆಶ್ರಯದಲ್ಲಿ ಡಾ ಬಿ.ಆರ್. ಅಂಬೇಡ್ಕರ್ 122ನೇ ಜನ್ಮ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಡಾ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲೆ ಹಾಕುವ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

