ಸುಭದ್ರ ಚುನಾವಣೆಗೆ ಶ್ರಮಿಸಿ
ಹಾವೇರಿ: ಜಿಲ್ಲೆಯಲ್ಲಿ 93 ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಪ್ರತಿ ಅಧಿಕಾರಿಗೆ ನಿಯೋಜಿತವಾದ ಮತಗಟ್ಟೆ ವ್ಯಾಪ್ತಿಯಲ್ಲಿ ನಿರಂತರ ಕಣ್ಗಾವಲಾಗಿ ದಕ್ಷತೆ ಹಾಗೂ ಚುರುಕಿನಿಂದ ಕರ್ತವ್ಯ ನಿರ್ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಜಿ. ಜಗದೀಶ್ ಕರೆ ನೀಡಿದರು.
ಮೇ 5ರಂದು ಜರುಗಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಲು ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳ ಸಭೆ ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿತು.
ಚುನಾವಣೆ ದಿನದಂದು ಪ್ರತಿ 1ರಿಂದ 2 ಗಂಟೆ ಅವಧಿಯಲ್ಲಿ ತಮಗೆ ವಹಿಸಿದ 10ರಿಂದ 12 ಮತಗಟ್ಟೆಗಳಿಗೆ ವಾಹನದಲ್ಲಿ ಸುತ್ತಾಡಿ, ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿದೆಯೇ ಇಲ್ಲವೆ ಎಂಬುದನ್ನು ಪರಿಶೀಲಿಸಿ, ಯಾವುದೇ ಸಮಸ್ಯೆ ಇದ್ದರೂ ಹತ್ತಿರದ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನಿಸಬೇಕು. ಪ್ರತಿ ಮತಗಟ್ಟೆಯಲ್ಲಿ ಮೂಲಭೂತ ಸೌಲಭ್ಯ ಖಚಿತಪಡಿಸಿಕೊಂಡು ಆ ವ್ಯಾಪ್ತಿಯ ಮತದಾರರಿಗೆ ಭಾವಚಿತ್ರಯುಕ್ತ ಚೀಟಿ ಮುಟ್ಟಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸೆಕ್ಟರ್ ಅಧಿಕಾರಿಗಳಿಗೆ ನೀಡಿದ ಮಾರ್ಗ ನಕ್ಷೆ, ಸಂವಹನ ಯೋಜನೆ, ವಾಹನ ಸೌಲಭ್ಯದ ಗರಿಷ್ಠ ಪ್ರಯೋಜನ ಪಡೆದು ಚುನಾವಣಾ ಪ್ರಕ್ರಿಯೆ ನಡೆದಾಗ ಮತಗಟ್ಟೆಯಿಂದ 200 ಮೀಟರ್ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷದ ಕಚೇರಿ ಮತ್ತು ಚಟುವಟಿಕೆಗಳು ಇರದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. ಚುನಾವಣಾ ನಿಯಂತ್ರಣ ಕೊಠಡಿಯ ನಿರ್ವಹಣಾಧಿಕಾರಿಯಾಗಿರುವ ತೋಟಗಾರಿಕಾ ಉಪನಿರ್ದೇಶಕ ಮೊಹಮ್ಮದ ಜಾಫರ್ ಅವರು ಸೆಕ್ಟರ್ ಅಧಿಕಾರಿಗಳ ಜವಾಬ್ದಾರಿ, ಕರ್ತವ್ಯ ನಿರ್ವಹಿಸುವಾಗ ಜಾಗರೂಕತೆಗಳ ಬಗ್ಗೆ ವಿವರಿಸಿದರು. ಪರೀಕ್ಷಾರ್ಥ ಉಪ ವಿಭಾಗಾಧಿಕಾರಿ ಸತೀಶಕುಮಾರ, ಚುನಾವಣಾ ತಹಸೀಲ್ದಾರ್ ಕೆ.ಎಸ್. ಪಾಟೀಲ್, ಶಿರಸ್ತೆದಾರ ಎಚ್.ಜಿ. ನಾಯಕ, ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

