ಹಾವೇರಿ

ಬಿಜೆಪಿಯಿಂದ ಜನರಿಗೆ ಮೋಸ: ಬಸವರಾಜ ಶಿವಣ್ಣವರ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 16
ಮತದಾರ ನೀಡಿದ್ದ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳದ ಬಿಜೆಪಿ, ವಿಧಾನಸೌಧದ 3ನೇ ಮಹಡಿಯನ್ನು ತಮ್ಮಿಷ್ಟದಂತೆ ಬಳಸಿಕೊಂಡಿದ್ದಲ್ಲದೇ, ಒಂದುವರೆ ವರ್ಷದಲ್ಲಿ 3 ಮುಖ್ಯಮಂತ್ರಿಗಳನ್ನು ಪರಿಚಯಿಸಿ ಜನರಿಗೆ ಮೋಸವೆಸಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಶಿವಣ್ಣನವರ ಆರೋಪಿಸಿದರು.
ಮಂಗಳವಾರ ಗುಡ್ಡದಮಲ್ಲಾಪುರ ಗ್ರಾಮದಲ್ಲಿ ಮತ ಯಾಚನೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದೊಂಬರಾಟ: 5 ವರ್ಷಗಳ ಅಧಿಕಾರಾವಧಿಯಲ್ಲಿ ರಾಜಕೀಯ ದೊಂಬರಾಟ ನಡೆಸಿದ ಬಿಜೆಪಿ ಶಾಸಕರು, ಸಮನ್ವಯದ ಕೊರತೆಯಿಂದಾಗಿ ರೆಬೆಲ್ ಎಂಎಲ್‌ಎಗಳ ಅಧೀನದಲ್ಲಿಯೇ ಸರ್ಕಾರ ಅಧಿಕಾರ ನಡೆಸಿದೆ. ಹೀಗಾಗಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದರು.
ನೀತಿಗೆಟ್ಟ ರಾಜಕೀಯ: ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡು ಬಿಜೆಪಿ ನಡೆಸಿದ ಅಧಿಕಾರವನ್ನು ರಾಜ್ಯದ ಜನತೆ ನೋಡುತ್ತಲೇ ಬಂದಿದ್ದು, ಭ್ರಷ್ಟ ಹಾಗೂ ನೀತಿಗೆಟ್ಟ ಮಂತ್ರಿಗಳಿಂದ ಮತದಾರರು ಬೇಸತ್ತಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನ್ನು ಮತದಾರರೆ ಆಯ್ಕೆ ಮಾಡಲು ನಿರ್ಧರಿಸಿದ್ದು, ಅದಿಕಾರ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.
ಆತ್ಮವಿಮರ್ಶೆ ಮಾಡಿಕೊಳ್ಳಲಿ:ಕಾಂಗ್ರೆಸ್ ಆಡಳಿತಾವಧಿಯಲ್ಲಿ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ ಚಾಲನೆ ನೀಡಲಾಗಿತ್ತು. ಆದರೆ ಮುಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಯೋಜನೆ ಪೂರ್ಣಗೊಳಿಸಿ ರೈತರಿಗೆ ನೀರು ಕೊಡಲು ಸಾಧ್ಯವಾಗಿಲ್ಲ. ಕ್ಷೇತ್ರದಲ್ಲಿ ನೀರಾವರಿ ಸೌಲಭ್ಯ ನೀಡಿದ್ದಾಗಿ ಸುಳ್ಳು ಪ್ರಚಾರ ಮಾಡುತ್ತಿರುವ ಹಿಂದಿನ ಶಾಸಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು.
ಯೋಜನೆ ಆರಂಭಿಸಿದ ಕಾಂಗ್ರೆಸ್ ಉದ್ಘಾಟನೆ ಮಾಡುವ ಅವಕಾಶ ಒದಗಿ ಬಂದಿದ್ದು, ಶಾಸಕನಾಗಿ ಆಯ್ಕೆಯಾದ ಮೂರು ತಿಂಗಳಲ್ಲಿ ರೈತರ ಜಮೀನುಗಳಿಗೆ ನೀರು ಹರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಹುಸೇನಸಾಬ ದೊಡ್ಡಮನಿ, ಕಾಗಿನೆಲೆ ಹೋಬಳಿ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಕೆಪಿಸಿಸಿ ಸದಸ್ಯ ರುದ್ರಣ್ಣ ಹೊಂಕಣ, ಹುಚ್ಚನಗೌಡ್ರ ಲಿಂಗನಗೌಡ್ರ, ಪಂಚಾನನ ಬಡಿಗೇರ, ಸುರೇಶ ಮೆಣಸಿನಹಾಳ, ಚನ್ನಬಸಪ್ಪ ಪೂಜಾರ, ಹುಚ್ಚಯ್ಯ ಹಮ್ಮಿಗಿಮಠ, ಗ್ರಾಪಂ ಉಪಾಧ್ಯಕ್ಷೆ ಸುಮಿತ್ರಾ ನವಲೆ, ಸದಸ್ಯ ಸುರೇಶ ಲಂಕೇರ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.