ಹಾವೇರಿ

ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್‌ನತ್ತ ಜನರು

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಏ. 16
ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಈಗಾಗಲೇ 60 ಹಳ್ಳಿಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇನೆ. ಜನತೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ 17ರಂದು ಬೆಳಗ್ಗೆ 10.30ಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಶಾಸಕ ಬಿ.ಸಿ. ಪಾಟೀಲ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗೆ ಪಟ್ಟಣದ ದುರ್ಗಾದೇವಿಗೆ ಹಾಗೂ ದರ್ಗಾಕ್ಕೆ ತೆರಳಿ ಪೂಜೆ ಸಲ್ಲಿಸಿ ಕಾಂಗ್ರೆಸ್ ಪಕ್ಷದ ಕೇಂದ್ರ ವೀಕ್ಷಕ ಸೂರ್ಯಪ್ರಕಾಶರೆಡ್ಡಿ ಕೋಟಾ ಸಮ್ಮುಖದಲ್ಲಿ ನಾಮ ಪತ್ರಸಲ್ಲಿಸುತ್ತೇನೆ ಎಂದು ತಿಳಿಸಿದರು. ನಂತರ ಇಲ್ಲಿನ ಜಿ.ಬಿ. ಶಂಕರರಾವ್ ವೃತ್ತದಿಂದ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆ ನಡೆಸಿ ತಂಬಾಕದ ಮೈದಾನದಲ್ಲಿ 12.30ಕ್ಕೆ ಬಹಿರಂಗ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ತಾಲೂಕಿನಲ್ಲಿ ನಾನು ಕೊಟ್ಟ ಮಾತಿನಂತೆ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಸಾಕಷ್ಟು ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ. ನನ್ನ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿಗೆ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಮಾಡಿದೆ. ಆದರೂ ನಾನು ಶಕ್ತಿ ಮೀರಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಗುರಿ ಹೊಂದಿದ್ದೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವನಜಾ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ. ಶಿವನಗೌಡ್ರ, ಡಿ.ಸಿ. ಪಾಟೀಲ, ಸೃಷ್ಠಿ ಪಾಟೀಲ, ತಿರಕಪ್ಪ ಗುಡ್ಡಳ್ಳಿ, ಮಹ್ಮದ್ ಹುಸೇನ ವಡ್ಡಿನಕಟ್ಟಿ, ಮೊದಲಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.