ಹಾವೇರಿ

ಅಭಿವೃದ್ಧಿ ಕಾರ್ಯಗಳೇ ಗೆಲವಿಗೆ ರಕ್ಷೆ

Published On :

ಹಾವೇರಿ: ಸಹಸ್ರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳೊಂದಿಗೆ ಹಾವೇರಿ ವಿಧಾನಸಭಾ ಮತಕ್ಷೇತ್ರದ ಕೆಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ನೆಹರು ಓಲೇಕಾರ, ಜೆಡಿಎಸ್ ಅಭ್ಯರ್ಥಿಯಾಗಿ ಪರಮೇಶ್ವರಪ್ಪ ಮೇಗಳಮನಿ ಬುಧವಾರ ನಾಮಪತ್ರ ಸಲ್ಲಿಸಿದರು.
ಪುರಸಿದ್ದೇಶ್ವರ ದೇವಸ್ಥಾನ ಬಳಿ ಜಮಾಯಿಸಿದ್ದ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತೆರೆದ ವಾಹನದಲ್ಲಿ ತೆರಳಿದ ಓಲೇಕಾರ, ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಚುನಾವಣಾಧಿಕಾರಿ ಚನ್ನಬಸಪ್ಪ ಅವರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ಮೆರವಣಿಗೆ: ಮೆರವಣಿಗೆಯುದ್ದಕ್ಕೂ ಪಾಲ್ಗೊಂಡಿದ್ದ ಕಾರ್ಯಕರ್ತರು, ಕೆಜೆಪಿ ಹಾಗೂ ಓಲೇಕಾರ ಪರ ಜಯಘೋಷ ಕೂಗಿದ್ದು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಹಾನಗಲ್ ವಿಧಾನಸಭಾ ಮತಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಸಿ.ಎಂ. ಉದಾಸಿ, ಮಾಜಿ ಸಂಸದ ಚಿನ್ನಿಕಟ್ಟಿ, ಸುರೇಶ ಹೊಸಮನಿ, ಮತ್ತಿತರರು ಪಾಲ್ಗೊಂಡಿದ್ದರು.
ಬಿಜೆಪಿ ಠೇವಣಿ ಉಳಿಕೆ ಕಷ್ಟಸಾಧ್ಯ: ಈ ಸಂದರ್ಭ ನೆಹರು ಓಲೇಕಾರ ಮಾತನಾಡಿ, ಕ್ಷೇತ್ರದಲ್ಲಿ ತಮ್ಮ ಅಧಿಕಾರ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳೇ ತಮ್ಮ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಹಾವೇರಿಯಲ್ಲಿ ಠೇವಣಿ ಉಳಿಸಿಕೊಳ್ಳುವುದು ಕಷ್ಟಸಾಧ್ಯ ಎಂದ ಅವರು, ಪ್ರಸಕ್ತ ಚುನಾವಣೆಯಲ್ಲಿ ತಮಗೆ ನೇರ ಎದುರಾಳಿ ಕಾಂಗ್ರೆಸ್ ಆಗಿದೆ ಎಂದರು.
ಕ್ಷೇತ್ರದಲ್ಲಿ ಶಾಸಕನಾಗಿ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ ತೃಪ್ತಿ ತಮಗಿದೆ. ಪ್ರಸಕ್ತ ಚುನಾವಣೆಯಲ್ಲಿ ಮತ್ತೆ ಆಯ್ಕೆಯಾಗುವ ಮೂಲಕ ರೈತರ, ದೀನದಲಿತ ಹಾಗೂ ಶ್ರೀಸಾಮಾನ್ಯ ಕಷ್ಟ, ಕಾರ್ಪಣ್ಯಗಳಿಗೆ ಸ್ಪಂದಿಸಲು ಪ್ರಯತ್ನಿಸುವುದಾಗಿಯೂ ತಿಳಿಸಿದರು.
ಜೆಡಿಎಸ್ ರೈತ ಪರ: ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ತೆರಳಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ ಮೇಗಳಮನಿ ಮಾತನಾಡಿ, ರೈತರ ಪರ ಹೋರಾಟ ಮಾಡುವ ಏಕೈಕ ಪಕ್ಷ ಜೆಡಿಎಸ್ ಆಗಿದೆ. ಪ್ರಸಕ್ತ ಚುನಾವಣೆಯಲ್ಲಿ ಹಾವೇರಿ ಮತಕ್ಷೇತ್ರದಿಂದ ಅಭೂತಪೂರ್ವ ಗೆಲವು ಸಾಧಿಸುವ ಮೂಲಕ ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದರು.
ಜಿಲ್ಲಾಧ್ಯಕ್ಷ ಗಾಜೀಗೌಡ್ರ, ಸತೀಶ ಅಗಡಿ, ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.