ಹಾವೇರಿ

ಜೆಡಿಎಸ್ ಅಚಾತುರ್ಯ: ಬಿಜೆಪಿ ಅಧಿಕಾರಕ್ಕೆ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 18
ಕೋಮುವಾದದ ಹಣೆಪಟ್ಟಿ ಕಟ್ಟಿಕೊಂಡಿದ್ದ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಜನತಾ ಪರಿವಾರದ ಮುಖಂಡರು ಕೈಜೋಡಿಸಿದ್ದೇ ಕಾರಣ ಅಂದು ಶುದ್ಧವಾಗಿದ್ದ ಬಿಜೆಪಿ ಮತ್ತೆ ಸ್ವಾರ್ಥಿಗಳಿಂದ ಕಲುಷಿತಗೊಳ್ಳುತ್ತಿದೆ ಎಂದು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಆರೋಪಿಸಿದರು.
ಚುನಾವಣಾ ಪ್ರಚಾರಾರ್ಥವಾಗಿ ಗುರುವಾರ ಬ್ಯಾಡಗಿ ಮತಕ್ಷೇತ್ರದ ನಾಗನೂರಿನಲ್ಲಿ ಸೇರಿದ್ದ ಕಾರ್ಯಕರ್ತರನ್ನು ದ್ದೇಶಿಸಿ ಅವರು ಮಾತನಾಡಿದರು.
ಬಿಜೆಪಿಗೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಏಳೇಳು ಜನ್ಮಕ್ಕೂ ಸಾಧ್ಯವಿದ್ದಿಲ್ಲ. ಕೇವಲ ನಗರ ಪ್ರದೇಶಗಳಲ್ಲಿ 40ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯುತ್ತಿದ್ದ ಬಿಜೆಪಿ ಬಿ.ಎಸ್. ಯಡಿಯೂರಪ್ಪ ಅವರ ಶ್ರಮದ ಫಲವಾಗಿ ಸರ್ವರಿಗೂ ಸಮಪಾಲು ಸರ್ವರಿಗೂ ಬಾಳು ಘೋಷಣೆಯೊಂದಿಗೆ ರಾಜ್ಯದಲ್ಲಿನ ಜನತಾ ಪರಿವಾರದ ಬಹುತೇಕ ಮುಖಂಡರನ್ನು ಬಿಜೆಪಿಗೆ ಬರಮಾಡಿಕೊಳ್ಳುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದ್ದಾರೆ ಎಂದರು.
ಬಿ.ಎಸ್. ಯಡಿಯೂರಪ್ಪನವರ ಏಳಿಗೆಯನ್ನು ಸಹಿಸಲಾಗದ ಬಿಜೆಪಿ ಮುಖಂಡರು ಹತ್ತಿದ ಮೇಲೆ ಏಣಿಯನ್ನು ಒದ್ದರು ಎನ್ನುವ ಮಾತಿನಂತೆ ಕುತಂತ್ರದಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ಅಷ್ಟೇ ಅಲ್ಲದೇ ಲೋಕಾಯುಕ್ತರ ಮೇಲೆ ಹಿಡಿತ ಸಾಧಿಸುವ ಮೂಲಕ ಅಕ್ರಮ ಗಣಿ ಸಾಗಾಣಿಕೆಯಲ್ಲಿ ಬಿಎಸ್‌ವೈ ಹೆಸರು ಸೇರಿಸುವ ಮೂಲಕ ಉಸಿರುಗಟ್ಟುವ ವಾತಾವರಣ ನಿರ್ಮಿಸಿ ಜೈಲಿಗೆ ಸೇರುವಂತೆ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರ ದಾಹದಿಂದಾಗಿ ಆಂತರಿಕ ಕಚ್ಚಾಟ ಹಾಗೂ ಲಕ್ಷ ಕೋಟಿ ರು.ಗೂ ಅಧಿಕವಾದ ಮೂರು ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದ ಅವರು, ರಾಜ್ಯದ ನೆಲ-ಜಲ-ಭಾಷೆಗಳ ರಕ್ಷಣೆ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಾಣಕ್ಕಾಗಿ ಪ್ರಾದೇಶಿಕ ಪಕ್ಷಗಳ ಕಲ್ಪನೆಯೊಂದಿಗೆ ಉದಯಿಸಿರುವ ಕೆಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ನೀಲಪ್ಪ ಹೆಗ್ಗಪ್ಪ ಬಾರ್ಕಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮುದ್ದಪ್ಪ ಗುಳಣ್ಣನವರ, ಗದಿಗೆಪ್ಪ ಮಹದೇವಪ್ಪ ರಟ್ಟಿಹಳ್ಳಿ, ನಾಗರಾಜ ಕೃಷ್ಣಾಜಿ ಪಾಟೀಲ ಕಾಂಗ್ರೆಸ್ ಪಕ್ಷ ತೊರೆದು ಕೆಜೆಪಿಗೆ ಸೇರ್ಪಡೆಯಾದರು. ಮಾಜಿ ಶಾಸಕ ಸುರೇಶಗೌಡ ಪಾಟೀಲ, ಸುರೇಶ್ ಯತ್ನಳ್ಳಿ, ರವೀಂದ್ರ ಪಟ್ಟಣಶೆಟ್ಟಿ, ಮುರಿಗೆಪ್ಪ ಶೆಟ್ಟರ, ಶಿವಬಸಪ್ಪ ಕುಳೇನೂರ, ನಾಗರಾಜ ಬಳ್ಳಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.