ಜಗದೀಶ ಶೆಟ್ಟರ್ ಮತ್ತೆ ಸಿಎಂ
ಬ್ಯಾಡಗಿ: ವೀರಶೈವ ಸಮುದಾಯ ಯಾರ ವೋಟ್ ಬ್ಯಾಂಕ್ ಆಗಲು ಸಾಧ್ಯವಿಲ್ಲ. ಪ್ರಬುದ್ಧ ಮತದಾರರು ಜಗದೀಶ ಶೆಟ್ಟರ್ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಲಿದ್ದಾರೆ ಎಂದು ಬ್ಯಾಡಿಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಶುಕ್ರವಾರ ಪಟ್ಟಣದ ಎಪಿಎಂಸಿ ಯಾರ್ಡ್, ವಿವಿಧ ಬಡಾವಣೆಗಳಲ್ಲಿ ಮತಯಾಚನೆ ನಡೆಸಿ, ಬಳಿಕ ಮಾತನಾಡಿದರು. ರಾಜಕೀಯ ಎಂಬುದು ಹಾವು-ಏಣಿ ಆಟ. ಇಂತಹ ಚದುರಂಗದಾಟದಲ್ಲಿ ಸೋಲು-ಗೆಲುವು ಇದ್ದದ್ದೇ. ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಅರ್ಹತೆಗೆ ಸಿಕ್ಕ ಪ್ರತಿಫಲವಾಗಿದೆಯೇ ಹೊರತು ಯಾರಿಂದಲೂ ಬಂದಂತಹ ಬಳುವಳಿಯಲ್ಲ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯವನ್ನು 60 ವರ್ಷ ಆಳ್ವಿಕೆ ನಡೆಸಿದರೂ, ಅಭಿವೃದ್ಧಿ ಕಡೆಗೆ ಗಮನ ಹರಿಸಿಲ್ಲ. ಬಿಜೆಪಿಗೆ ರಾಜ್ಯದ ಮತದಾರರು ಒಂದೇ ಅವಧಿ ಅವಕಾಶ ಕಲ್ಪಿಸಿದ್ದಾರೆ, ಅಭಿವೃದ್ಧಿ ಮಾಡಿದ ಬಿಜೆಪಿ ಇಡೀ ರಾಜ್ಯದ ದಿಕ್ಕನ್ನೇ ಬದಲಿಸಿದೆ ಎಂದರು.
ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಬಿಜೆಪಿ ಪ್ರಾಧಿಕಾರ ರಚಿಸಿ, ಬಜೆಟ್ನಲ್ಲಿ ಹಣ ಮೀಸಲಿರಿಸಲಾಗಿದೆ. ಅಲ್ಲದೆ ರಾಜ್ಯದ ಎಲ್ಲ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆ, ಉಚಿತ ಶಿಕ್ಷಣ, ಕಡಿಮೆ ಬಡ್ಡಿದರದ ಸಾಲದ ವಿತರಣೆಗೆ ಆದ್ಯತೆ ನೀಡಲಾಗಿದೆ ಎಂದು ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ತಾಲೂಕಾಧ್ಯಕ್ಷ ಚಂದ್ರಪ್ಪ ಮುಚ್ಚಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಣ್ಣ ಉಕ್ಕುಂದ, ವೀರೇಂದ್ರ ಶೆಟ್ಟರ, ಚಂದ್ರಪ್ಪ ಆಲದಕಟ್ಟಿ, ಎಪಿಎಂಸಿ ಸದಸ್ಯ ಶಂಕರಗೌಡ ಪಾಟೀಲ, ಜಯಣ್ಣ ಮಲ್ಲಿಗಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

