ಡಾ ಅಂಬೇಡ್ಕರ್, ಬಾಬೂಜಿ ಜಯಂತಿ
ಹಾನಗಲ್ಲ: ಪರಿಶಿಷ್ಟ ಜಾತಿ, ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಏ. 22ರಿಂದ 24ರ ವರೆಗೆ ಡಾ ಬಿ.ಆರ್. ಅಂಬೇಡ್ಕರ ಹಾಗೂ ಬಾಬು ಜಗಜೀವನರಾಮ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಿತಿ ಜಿಲ್ಲಾ ಸಂಚಾಲಕ ನಿಂಗಪ್ಪ ಗಾಳೆಮ್ಮನವರ ನೇತೃತ್ವದಲ್ಲಿ ಜಯಂತಿ ಕಾರ್ಯಕ್ರಮ ಹಾಗೂ ಹಿಂದುಳಿದ ಜನಾಂಗದ ಜನಜಾಗೃತಿ, ಸ್ವಾಭಿಮಾನಿ ಸಂಕೇತದ ಜಾಥಾ ಗ್ರಾಮಗಳಲ್ಲಿ ಸಂಚರಿಸಲಿದೆ. ಪರಿಶಿಷ್ಟರು ಸೇರಿದಂತೆ ಶೋಷಿತರ ಏಕತೆ ಕುರಿತು ಜಾಥಾ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಡಿಎಸ್ಎಸ್ ಮುಖಂಡರಾದ ಎಫ್.ಕೆ. ಕಾಳೇರ, ಗಿರೀಶ ಸವಣೂರ, ಬಸವರಾಜ ಶೇಷಗಿರಿ, ಹೊನ್ನಪ್ಪ ಹರಿಜನ, ನಂಜುಂಡೇಶ್ವರ ವಡ್ಡರ, ರಮೇಶ ವಾಲ್ಮೀಕಿ, ಪರಶುರಾಮ ಹುಳ್ಳಿಕಾಶಿ, ಶ್ರೀಕಾಂತ ಬಾಬಾನವರ ಮುಂತಾದವರು ಪಾಲ್ಗೊಳ್ಳುವರು ಎಂದು ಗಾಳೆಮ್ಮನವರ ತಿಳಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ಬೆಂಬಲಿಸಿ: ಆಲದಕಟ್ಟಿ
ಹಾನಗಲ್ಲ: ಪ್ರತ್ಯೇಕ ಕೃಷಿ ಬಜೆಟ್ ಮಂಡನೆ ಮೂಲಕ ರೈತ ಪರ ಆಡಳಿತ ನೀಡಿದ್ದ ಬಿ.ಎಸ್. ಯಡಿಯೂರಪ್ಪರನ್ನು ಈ ಬಾರಿ ಚುನಾವಣೆಯಲ್ಲಿ ಬೆಂಬಲಿಸುವ ಅವಶ್ಯಕತೆಯಿದೆ. ಹಾನಗಲ್ಲ ತಾಲೂಕಿನಲ್ಲಿರುವ ಎರಡು ನದಿಗಳ ನೀರಿನ ಸದ್ಬಳಕೆಗಾಗಿ ಹಲವಾರು ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಮಾಜಿ ಸಚಿವ, ಕೆಜೆಪಿ ಅಭ್ಯರ್ಥಿ ಸಿ.ಎಂ. ಉದಾಸಿ ಅವರಿಗೆ ಕ್ಷೇತ್ರದ ರೈತ ಸಮೂಹ ಬೆಂಬಲಿಸಬೇಕು ಎಂದು ಹಾನಗಲ್ಲ ತಾಲೂಕು ರೈತ ಸಂಘದ ಸಂಘಟನಾ ಕಾರ್ಯದರ್ಶಿ ಅಡಿವೆಪ್ಪ ವೀರಪ್ಪ ಆಲದಕಟ್ಟಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

