ಹಾವೇರಿ

ಗುರುತಿನ ಚೀಟಿಗೆ ಪರ್ಯಾಯ ದಾಖಲೆಗಳು

Published On :

ಹಾವೇರಿ: ಭಾರತ ಚುನಾವಣಾ ಆಯೋಗವು ಮೇ 5ರಂದು ರಾಜ್ಯದಲ್ಲಿ ನಡೆಸಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಮತಗಟ್ಟೆಯಲ್ಲಿ ತೋರಿಸಿ ಮತ ಚಲಾಯಿಸಬೇಕಾಗುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿನ ಚೀಟಿ ಹೊಂದದಿರುವ ಮತದಾರರು ಆಯೋಗವು ನಿಗದಿಪಡಿಸಿದ ಪರ್ಯಾಯ ಗುರುತಿನ ಪತ್ರಗಳನ್ನು ಹಾಜರುಪಡಿಸಿ ಮತ ಚಲಾಯಿಸಬಹುದಾಗಿದೆ.
ಮತದಾರರ ಭಾವಚಿತ್ರ ಗುರುತಿನ ಚೀಟಿ ಹೊಂದಿರದ ಮತದಾರರು ಅಥವಾ ಅಂತಹ ಕಾರ್ಡ್ನ್ನು ಕಳೆದುಕೊಂಡಿರುವವರು ಈ ಕೆಳಗೆ ಸೂಚಿಸಿರುವ ಪರ್ಯಾಯ ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಮತಗಟ್ಟೆಯಲ್ಲಿ ತೋರಿಸಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಪರ್ಯಾಯ ದಾಖಲೆಗಳು:  ಅಧಿಕೃತ ಮತದಾರರ ಭಾವಚಿತ್ರ ಸಹಿತ ಗುರುತಿನ ಚೀಟಿ, ಪಾಸ್ಪೋರ್ಟ್, ಡ್ರೈವಿಂಗ್ ಲೈಸನ್ಸ್, ಆದಾಯ ತೆರಿಗೆ ಗುರುತಿನ ಚೀಟಿ (ಪಾನ್ ಕಾರ್ಡ್) ರಾಜ್ಯ, ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ಯಮಗಳು, ಸ್ಥಳೀಯ ಸಂಸ್ಥೆಗಳು ಅಥವಾ ಇತರೆ ಖಾಸಗಿ ಔಧ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸಾರ್ವಜನಿಕ ಔಧ್ಯಮಿಕ ಬ್ಯಾಂಕ್ ಕಿಸಾನ್ ಕಾರ್ಡ್ ಪೋಸ್ಟ್ ಆಫೀಸ್ ಭಾವಚಿತ್ರವಿರುವ ಪಾಸ್ ಪುಸ್ತಕ, ಮಾನ್ಯತೆ ಪಡೆದ ನೋಂದಾಯಿತ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು, ಪಟ್ಟಾ ಮುಂತಾದ ಆಸ್ತಿ ದಾಖಲೆ, ಭಾವಚಿತ್ರವಿರುವ ಪಡಿತರ ಚೀಟಿಗಳು, ಸಕ್ಷಮ ಪ್ರಾಧಿಕಾರ ನೀಡಿರುವ ಎಸ್ಸಿ, ಎಸ್ಟಿ, ಓಬಿಸಿ ಭಾವಚಿತ್ರವಿರುವ ಪ್ರಮಾಣ ಪತ್ರಗಳು, ಭಾವಚಿತ್ರವಿರುವ ಪ್ರಮಾಣ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ, ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು, ವೃದ್ಧಾಪ್ಯ ವೇತನ ಆದೇಶಗಳು, ವಿಧವಾ ವೇತನ ಆದೇಶಗಳು, ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು, ಭಾವಚಿತ್ರವಿರುವ ಶಸ್ತ್ರ ಪರವಾನಿಗೆ, ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಚೀಟಿ, ಮಾಜಿ ಯೋಧರ ಭಾವಚಿತ್ರವಿರುವ ಸಿಎಸ್ಡಿ ಕ್ಯಾಂಟೀನ್ ಕಾರ್ಡ್, 31-3-2013ರ ವರೆಗೆ ನೀಡಿರುವ ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ, 31-3- 2013ರ ವರೆಗೆ ನೀಡಿರುವ ಎನ್ಆರ್ಇಜಿ (ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ) ಯೋಜನೆಯ ಅಡಿಯಲ್ಲಿ ನೀಡಿರುವ ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್, ಮುನಿಸಿಪಲ್ ಕಾರ್ಪೋರೇಶನ್, ಸಿಎಂಸಿ, ಟಿಎಂಸಿ ಇತ್ಯಾದಿ ಸ್ಥಳೀಯ ಸಂಸ್ಥೆಗಳು ನೌಕರರು ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು, ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರಿಕರ ಗುರುತಿನ ಚೀಟಿ, ಕಾರ್ಮಿಕ ಕಲ್ಯಾಣ ಮಂತ್ರಾಲಯವು ನೀಡಿದ ಭಾವಚಿತ್ರ ಸಹಿತ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಎನ್ಪಿಆರ್ ಯೋಜನೆಯಡಿಯಲ್ಲಿ ನೀಡಲಾದ ಗುರುತು ಪತ್ರ ಮತ್ತು ಆಧಾರ ಗುರುತಿನ ಚೀಟಿ.
ಮತದಾರರ ಗುರುತಿನ ಚೀಟಿ ಹೊಂದಿರದವರು (ಎಪಿಕ್ ಕಾರ್ಡ್) ಮೇಲ್ಕಂಡ ಭಾವಚಿತ್ರಯುಕ್ತ ಚೀಟಿ ತೋರಿಸಿ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ವಿ. ಅನ್ಬುಕುಮಾರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.