ಹಾವೇರಿ

ಬಿಜೆಪಿ ಅಭ್ಯರ್ಥಿ ಹಾದಿಮನಿ ಪ್ರಚಾರ

Published On :

ಕನ್ನಡಪ್ರಭ ವಾರ್ತೆ, ಹಾನಗಲ್ಲ, ಏ. 19
ಹಾನಗಲ್ಲ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹಾದಿಮನಿ ತಾಲೂಕಿನ ಹುಣಸಿಕಟ್ಟಿ, ಬೆಳಗಾಲಪೇಟ, ನೆಗವಣಿಗೆ ಹಾಗೂ ಮಹಾರಾಜಪೇಟ ಗ್ರಾಮಗಳಲ್ಲಿ ಸಂಚರಿಸಿ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಹಾರಾಜಪೇಟದಲ್ಲಿ ಶ್ರೀಕಾಂತ ಅಂಗಡಿ ಹಾಗೂ ಅಮರ ಶೆಟ್ಟರ್ ಅವರ ನೇತೃತ್ವದಲ್ಲಿ 20 ಕಾಂಗ್ರೆಸ್ ಮುಖಂಡರು ಹಾಗೂ ಕೆಜೆಪಿ ಮುಖಂಡರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಮತ ಯಾಚನೆ ನಂತರ ಮತದಾರರನ್ನುದ್ದೇಶಿಸಿ ಬಸವರಾಜ ಹಾದಿಮನಿ ಮಾತನಾಡಿ, ನೀರಾವರಿ ಪ್ರದೇಶ ಹೆಚ್ಚಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಕೆರೆಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ತಾವು ಆದ್ಯತೆ ನೀಡುವುದಾಗಿ ಹೇಳಿದರು.
ರೈತರ ಹೊಲಗಳಿಗೆ ಅಗತ್ಯವಿರುವ ರಸ್ತೆಗಳ ನಿರ್ಮಾಣ ಹಾಗೂ ದೇವಸ್ಥಾನ ಹಾಗೂ ಎಲ್ಲ ಧರ್ಮಗಳ ಪೂಜಾ ಸ್ಥಳಗಳ ಪುನರುಜ್ಜೀವನ ಕಾರ್ಯಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ರೈತರಿಗೆ ಉಚಿತ ವಿದ್ಯುತ್, ಸಣ್ಣ ರೈತರಿಗೆ ಸಹಾಯಧನ, ಗ್ರಾಮೀಣ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಬಿಜೆಪಿ ಸರಕಾರ ಹೆಚ್ಚು ಅನುದಾನ ಒದಗಿಸಲಿದೆ. ಕಳೆದ 5 ವರ್ಷಗಳ ಬಿಜೆಪಿ ಸರಕಾರದ ಸಾಧನೆಗಳೇ ನಮ್ಮ ಗೆಲುವಿಗೆ ಈ ಬಾರಿ ಚುನಾವಣೆಗೆ ಸಹಕಾರಿಯಾಗಿವೆ ಎಂದು ಹಾದಿಮನಿ ತಿಳಿಸಿದರು.
ಸಭೆಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಜಿ.ಬಿ. ಗುಡ್ಡಪ್ಪನವರ್, ರವಿಕುಮಾರ ಬೆಲ್ಲದ, ವೀರಣ್ಣ ನಿಂಬಣ್ಣನವರ್, ಎಸ್.ಆರ್. ಪಾಟೀಲ, ಎಸ್.ಕೆ. ಪೂಜಾರ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.