ಅಭಿವೃದ್ಧಿ ಕಾರ್ಯಗಳೇ ಗೆಲವಿಗೆ ಶ್ರೀರಕ್ಷೆ
ಬಂಕಾಪುರ: ಐದು ವರ್ಷಗಳ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳೆ ಪ್ರಸಕ್ತ ಚುನಾವಣೆಯಲ್ಲಿ ತಮಗೆ ಗೆಲವಿನ ಶ್ರೀರಕ್ಷೆಯಾಗಲಿವೆ ಎಂದು ಬಿಜೆಪಿ ಅಭ್ಯರ್ಥಿಯೂ ಆಗಿರುವ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಬಂಕಾಪುರದಲ್ಲಿ ಚುನಾವಣಾ ಪ್ರಚಾರ ನಡೆಸಿದ ನಂತರ ಮಾತನಾಡಿದ ಅವರು, ಸಾಮಾಜಿಕ ನ್ಯಾಯದ ಕುರಿತು ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡ ಕಾಂಗ್ರೆಸ್, ಚುನಾವಣೆಯಲ್ಲಿ ಮತ ರಾಜಕೀಯ ಮಾಡುತ್ತಿದೆ ಎಂದು ದೂರಿದರು. ಚುನಾವಣೆ ಬಂದಾಗ ಬಡಬಗ್ಗರ ಬಗ್ಗೆ ಅನುಕಂಪ ಹುಟ್ಟಿಕೊಳ್ಳುವ ಕಾಂಗ್ರೆಸ್ಸಿಗರಿಗೆ ಮತದಾರ ಪ್ರಭು ಪ್ರಸಕ್ತ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವ ಮೂಲಕ ತಮಗೆ ಅಭೂತಪೂರ್ವ ಗೆಲವು ತಂದುಕೊಡುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಈರಣ್ಣ ಪಟ್ಟಣಶೆಟ್ಟರ, ಪರಶುರಾಮ ಡಂಬಳ, ಸಿದ್ಧಲಿಂಗಸ್ವಾಮಿ ಕಟಗಿಮಠ ಬಿಜೆಪಿಗೆ ಸೇರ್ಪಡೆಗೊಂಡರು. ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಬಸವರಾಜ ನಾರಾಯಣಪುರ, ಸೋಮಶೇಖರ ಗೌರಿಮಠ, ಗುಡ್ಡಪ್ಪ ಮತ್ತೂರ, ರಾಘವೇಂದ್ರ ಮೇಲಗಿರಿ, ಅಶೋಕ ಪಟ್ಟಣಶೆಟ್ಟರ, ಗಂಗಾಧರ ಬಡ್ಡಿ, ಶಂಭಣ್ಣ ಶೆಟ್ಟರ, ವಿರೂಪಾಕ್ಷಪ್ಪ ಆಡಿನ, ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

