ಹಾವೇರಿ

ಇಂದು ರಾಣಿಬೆನ್ನೂರಿಗೆ ಎಲ್.ಕೆ. ಆಡ್ವಾಣಿ

Published On :

ರಾಣಿಬೆನ್ನೂರು:  ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಗೆಲವಿಗಾಗಿ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ಹಾಗೂ ಜಿಲ್ಲೆಯ 7 ತಾಲೂಕಿನಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಲು ಬಿಜೆಪಿ ರಾಷ್ಟ್ರೀಯ ನಾಯಕ ಎಲ್.ಕೆ. ಆಡ್ವಾಣಿ ಏ. 21ರಂದು ಮಧ್ಯಾಹ್ನ 3-30ಕ್ಕೆ ನಗರಕ್ಕೆ ಆಗಮಿಸುವರು ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಿಳಿಸಿದರು.
ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಸೇವೆ ಸಲ್ಲಿಸಿರುವ ಬಿಜೆಪಿ ಗೆಲವಿಗೆ ತಮ್ಮ ಮತ ನೀಡಲು ಮತದಾರರು ಕಾತುರರಾಗಿದ್ದಾರೆ. ಪಕ್ಷದಲ್ಲಿದ್ದ ಭ್ರಷ್ಟರೆಲ್ಲ ಬೇರೊಂದು ಪಕ್ಷದಲ್ಲಿ ಗುರುತಿಸಿಕೊಂಡಿರುವುದರಿಂದ ಬಿಜೆಪಿ ಸ್ವಚ್ಛ, ಸುಂದರ ಮನೆಯಾಗಿದ್ದು, ಬಿಜೆಪಿಗೆ ಗೆಲವು ನಿಶ್ಚಿತ ಎಂದರು. ಏ. 21ರ ಸಂಜೆ 3-30ಕ್ಕೆ ರಾಣಿಬೆನ್ನೂರು ನಗರದ ಹೊರ ಭಾಗದಲ್ಲಿರುವ ಬಿ.ಟಿ. ಪಾಟೀಲರ ಜಾಗೆಯಲ್ಲಿ ನಡೆಯಲಿರುವ ಸಮಾವೇಶಕ್ಕೆ ಸುಮಾರು 20 ಸಾವಿರ ಜನ ಸೇರುವರು ಎಂದು ಡಾ. ಕೇಲಗಾರ ತಿಳಿಸಿದರು. ನಗರ ಬಿಜೆಪಿ ಅಧ್ಯಕ್ಷ ರಾಜು ಸುರಳಿಕೇರಿಮಠ, ಕಾರ್ಯದರ್ಶಿ ಸಂಕಪ್ಪ ಮಾರನಾಳ, ವಿರಣ್ಣ ಅಂಗಡಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ, ಅಭ್ಯರ್ಥಿ ಅರುಣಕುಮಾರ ಪೂಜಾರ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.