ಕೆಜೆಪಿಗೆ ಮಾರುತಿ ನೇಮಕ
ಹಾನಗಲ್ಲ: ಕರ್ನಾಟಕ ಜನತಾ ಪಕ್ಷದ ಹಾನಗಲ್ಲ ತಾಲೂಕು ಕಾರ್ಯಕಾರಿಣಿ ಸಮಿತಿಯ ತಾಲೂಕು ಕಾರ್ಯದರ್ಶಿಯನ್ನಾಗಿ ಮಾರುತಿ ತಾಂದಳೆ ಅವರನ್ನು ತಾಲೂಕು ಅಧ್ಯಕ್ಷ ಎಂ.ಆರ್. ಪಾಟೀಲ ನೇಮಿಸಿದ್ದಾರೆ.
ಮುಖ್ಯೋಪಾಧ್ಯಾಯರು ಕೇಂದ್ರ ಸ್ಥಾನದಲ್ಲಿರಬೇಕು
ಹಾವೇರಿ: ಮೇ 5ರಂದು ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮತದಾನ ಜರುಗಲಿದ್ದು, ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ಮತಗಟ್ಟೆಯ ಅಧಿಕಾರಿಗಳು (ಬಿಎಲ್ಓ)ಗಳು ತಮ್ಮ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಚುನಾವಣೆ ಅಧಿಕಾರಿಗಳಿಗೆ ಚುನಾವಣೆ ಕಾರ್ಯಕ್ಕೆ ಎಲ್ಲ ಸಹಕಾರ ನೀಡಬೇಕೆಂದು ಹಾವೇರಿ ಉಪ ವಿಭಾಗಾಧಿಕಾರಿ ಚನ್ನಬಸಪ್ಪ ಸೂಚಿಸಿದ್ದಾರೆ. ಈಗಾಗಲೇ ಚುನಾವಣಾ ವೀಕ್ಷಕರು, ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಎಲ್ಲ ಮತಗಟ್ಟೆಗಳನ್ನು ವೀಕ್ಷಿಸಿದ್ದು, ಎಲ್ಲ ಮತಗಟ್ಟೆಗಳಲ್ಲಿ ಚುನಾವಣೆಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರು ಕೇಂದ್ರಸ್ಥಾನದಲ್ಲಿದ್ದು, ಸೂಕ್ತ ಕ್ರಮಕೈಕೊಳ್ಳಬೇಕೆಂದು ಸೂಚಿಸಿದ್ದಾರೆ.
ಹಿರೇಕೆರೂರು: ಬಿ.ಸಿ. ಪಾಟೀಲ್ ಮತ ಯಾಚನೆ
ಹಿರೇಕೆರೂರು: ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಯ ಹಿರೇಕೆರೂರು ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಬಿ.ಸಿ. ಪಾಟೀಲ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ನ ನೂರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

