ರು. 8 ಲಕ್ಷ ಮೌಲ್ಯದ ಸೀರೆ ವಶ
ರಾಣಿಬೆನ್ನೂರು: ಮತದಾರರಿಗೆ ಹಂಚುವುದಕ್ಕಾಗಿ 51 ಬಂಡಲ್ಗಳಲ್ಲಿ ಸಂಗ್ರಹಿಸಿಡಲಾಗಿದ್ದ ರು. 8 ಲಕ್ಷ ಅಂದಾಜು ಮೌಲ್ಯದ 5865 ಸೀರೆಗಳನ್ನು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬಿಬಿಎಂಪಿ ಮಾಜಿ ಉಪ ಮೇಯರ್ ಆರ್. ಶಂಕರ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಗರದ ಹಲಗೇರಿ ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಕನ್ನಡ ಕಾನ್ವೆಂಟ್ ಖಾಸಗಿ ಶಾಲೆ ಪಕ್ಕದಲ್ಲಿರುವ ಗೋದಾಮಿನಲ್ಲಿ ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್. ಶಂಕರ್ ಮತದಾರರಿಗೆ ಹಂಚುವುದಕ್ಕಾಗಿ ಸೀರೆಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಹಸೀಲ್ದಾರ್ ಎಚ್. ಶಿವಕುಮಾರ ಹಾಗೂ ತಾಲೂಕು ಚುನಾವಣಾಧಿಕಾರಿ ಬಸನಗೌಡ ಸಿಬ್ಬಂದಿ ಹಾಗೂ ಪೊಲೀಸರೊಂದಿಗೆ ದಾಳಿ ನಡೆಸಿ ಸೀರೆ ಹಾಗೂ ಆರ್. ಶಂಕರ್ ಭಾವಚಿತ್ರವಿರುವ 8 ಪ್ಯಾಕೆಟ್ ಶರ್ಟ್ಗಳನ್ನು ವಶಕ್ಕೆ ತೆಗೆದುಕೊಂಡಿದ್ದರೆ. ಬಿಬಿಎಂಪಿ ಮಾಜಿ ಉಪ ಮೇಯರ್, ರಾಣಿಬೆನ್ನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆರ್. ಶಂಕರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಹಸೀಲ್ದಾರ್ ಎಚ್. ಶಿವಕುಮಾರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

