ಕೆಜೆಪಿ, ಜೆಡಿಎಸ್ನಿಂದ ಪ್ರಚಾರದ ಫೋಟೋ ದುರ್ಬಳಕೆ: ಓಲೇಕಾರ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಏ. 23
ಪ್ರಚಾರಕ್ಕೆ ತೆರಳಿದಾಗ ಮತದಾರರೊಂದಿಗೆ ಫೋಟೋ ತೆಗೆಸಿಕೊಂಡು ಬಿಜೆಪಿ ತೊರೆದು ತಮ್ಮ ಪಕ್ಷಕ್ಕೆ ಸೇರಿದ್ದಾರೆಂದು ಪತ್ರಿಕೆಗಳಲ್ಲಿ ಪ್ರಚಾರ ಪಡೆದು ಕಾರ್ಯಕರ್ತರನ್ನು ಗೊಂದಲಕ್ಕಿಡು ಮಾಡುತ್ತಿರುವುದನ್ನು ಕೆಜೆಪಿ ಹಾಗೂ ಜೆಡಿಎಸ್ ಮುಖಂಡರು ನಿಲ್ಲಿಸದಿದ್ದರೆ ಕಾನೂನು ಕ್ರಮಕ್ಕಾಗಿ ಹೋರಾಟ ನಡೆಸಲಾಗುವುದೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಓಲೇಕಾರ ಎಚ್ಚರಿಕೆ ನೀಡಿದರು. ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಪ್ರಚಾರಕ್ಕಾಗಿ ನಗರದ ವಿವಿಧ ಓಣಿಗಳಿಗೆ ಮತ್ತು ತಾಲೂಕಿನ ಹಳ್ಳಿಗಳಿಗೆ ತೆರಳುತ್ತಿರುವ ಕೆಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು, ನಾಲ್ಕಾರು ಮತದಾರರೊಂದಿಗೆ ಫೋಟೋ ತೆಗೆಸಿಕೊಳ್ಳುತ್ತಾರೆ. ಫೋಟೋದಲ್ಲಿ ಇರುವವರೆಲ್ಲಾ ಬಿಜೆಪಿ ಬಿಟ್ಟು ಕೆಜೆಪಿ, ಬಿಜೆಪಿ ಬಿಟ್ಟು ಜೆಡಿಎಸ್ ಸೇರಿದ್ದಾರೆಂದು ಪತ್ರಿಕೆಗಳಿಗೆ ಹೇಳಿಕೆ ನೀಡಿ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದು, ಇಂಥ ಕೆಲಸವನ್ನು ತಕ್ಷಣದಿಂದ ನಿಲ್ಲಸದಿದ್ದರೆ ಕೆಜೆಪಿ ಹಾಗೂ ಜೆಡಿಎಸ್ ಮುಖಂಡರ ಮೇಲೆ ಕಾನೂನು ಕ್ರಮಕ್ಕಾಗಿ ಹೋರಾಟ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು. ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಮಾತನಾಡಿ, ಸೋಲಿನ ಭಯದಲ್ಲಿರುವ ಕೆಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು ಹೊಟ್ಟೆ ಕಿಚ್ಚಿನಿಂದ ಬಿಜೆಪಿಯ ಇಮೇಜೆ ಹಾಳು ಮಾಡುವುದಕ್ಕಾಗಿ, ಪಕ್ಷದ ಹೆಸರಿಗೆ ಧಕ್ಕೆ ಬರುವಂತ ರೀತಿಯಲ್ಲಿ ವರ್ತಿಸುತ್ತ ಪತ್ರಿಕೆಗಳಿಗೆ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮತದಾರರು ಪ್ರಜ್ಞಾವಂತರಾಗಿದ್ದು, ಬಿಜೆಪಿ ಅಭ್ಯರ್ಥಿಯಾದ ನನಗೆ ಮತ ನೀಡಲಿದ್ದು ಕೆಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಹಲಗೇರಿ ಗ್ರಾಪಂ ಅಧ್ಯಕ್ಷೆ ಹಸಿನಾಬಿ ಬಿಲ್ಲಹಳ್ಳಿ ಮಾತನಾಡಿ, 2 ದಿನಗಳ ಹಿಂದೆ ಜೆಡಿಎಸ್ ಮುಖಂಡರು ಪ್ರಚಾರಕ್ಕಾಗಿ ಹಲಗೇರಿ ಗ್ರಾಮಕ್ಕೆ ಬಂದಿದ್ದಾಗ ನಮ್ಮ ಜೊತೆ ಫೋಟೋ ತೆಗೆಸಿಕೊಂಡು ಪಕ್ಷವನ್ನು ಬಿಟ್ಟಿದ್ದಾರೆಂದು ಹೇಳಿಕೆ ನೀಡಿ ನಮ್ಮ ನಮ್ಮಲ್ಲಿ ಗೊಂದಲವನ್ನುಂಟು ಮಾಡಿದ್ದಾರೆ. ನಾನು ಬಿಜೆಪಿಯನ್ನು ಬಿಟ್ಟಿಲ್ಲ ಎಂದರು. ತಾಲೂಕು ಬಿಜೆಪಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ, ನಗರಾಧ್ಯಕ್ಷ ರಾಜು ಸುರಳಿಕೇರಿಮಠ, ನಗರಸಭೆ ಬಿಜೆಪಿ ಸದಸ್ಯರಾದ ಪ್ರಭುಸ್ವಾಮಿ ಕರ್ಜಗಿಮಠ, ಉಮೇಶಪ್ಪ ಹೊನ್ನಾಳಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಜಂಬಗಿ, ವಿ.ಸಿ. ಪಾಟೀಲ, ವಿಶ್ವನಾಥ ಹೊಳೆಬಾಗಿಲ, ವೆಂಕಟೇಶ ಏಕಬೋಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

