ನೀತಿ ಸಂಹಿತೆ ಉಲ್ಲಂಘನೆ: ಪಕ್ಷೇತರಅಭ್ಯರ್ಥಿ ಶಂಕರ ಬಂಧನ, ಬಿಡುಗಡೆ
ರಾಣಿಬೆನ್ನೂರು: ರಾಣಿಬೆನ್ನೂರು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಆರ್. ಶಂಕರ ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿಗಳು ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ನಗರ ಠಾಣೆ ಪೊಲೀಸರು, ಆರ್. ಶಂಕರ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ಬಿಡುಗಡೆಗೊಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿ ಆರ್. ಶಂಕರ ಅವರು ಮತದಾರರಿಗೆ ಹಂಚುವುದಕ್ಕಾಗಿ ನಗರದ ಹಲಗೇರಿ ರಸ್ತೆಯ ಪಕ್ಕದಲ್ಲಿರುವ ಖಾಸಗಿ ಶಾಲೆಯ ಗೋದಾಮಿನಲ್ಲಿ 51 ಬಂಡಲ್ಗಳಲ್ಲಿ ರು. 8 ಲಕ್ಷ ಮೌಲ್ಯದ 5865 ಸೀರೆಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಕುರಿತು ಖಚಿತ ಮಾಹಿತಿಯನ್ನಾಧರಿಸಿ ಸೋಮವಾರ ದಾಳಿ ನಡೆಸಿದ ತಹಸೀಲ್ದಾರ್ ಎಚ್. ಶಿವಕುಮಾರ, ತಾಲೂಕು ಚುನಾವಣಾಧಿಕಾರಿ ಬಸನಗೌಡ, ಅಕ್ರಮವಾಗಿ ಸಂಗ್ರಹಿಸಿದ್ದ ಸೀರೆಗಳನ್ನು ವಶಕ್ಕೆ ತೆಗೆದುಕೊಂಡು ಪಕ್ಷೇತರ ಅಭ್ಯರ್ಥಿ ಆರ್. ಶಂಕರ ಅವರ ಮೇಲೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ನಗರ ಠಾಣೆಯ ಪೊಲೀಸರು ಆರ್. ಶಂಕರ ಅವರನ್ನು ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ನ್ಯಾಯಾಧೀಶರಾದ ಮಿಸ್ಕಿನ್, ಆರ್. ಶಂಕರ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ನ್ಯಾಯಾಲಯದಿಂದ ಹೊರಗೆ ಬಂದ ಆರ್. ಶಂಕರ್ ಸುದ್ದಿಗಾರರೊಂದಿಗೆ ಮಾತನಾಡಿ, 6 ತಿಂಗಳ ಹಿಂದೆ ತಾಲೂಕಿನ ಬಡವರಿಗೆ ಹಂಚುವುದಕ್ಕಾಗಿ ನಾನು ಸೀರೆ ಖರಿದಿಸಿರುವುದು ಸತ್ಯ, ಸೀರೆ ಖರೀದಿಸಿದ 6 ತಿಂಗಳ ನಂತರ ಚುನಾವಣೆ ನೀತಿ ಸಂಹಿತೆ ಜಾರಿಗೆ ತಂದಿರುವ ಅಧಿಕಾರಿಗಳು, ವಿರೋಧಿಗಳ ಮಾತು ಕೇಳಿ ಸೀರೆಗಳನ್ನು ಹಿಡಿದು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ನನ್ನ ಮೇಲೆ ಕ್ರಮ ಜರುಗಿಸುತ್ತಿರುವುದಕ್ಕೆ ನಾನು ಒಪ್ಪುವುದಿಲ್ಲ. ಅಧಿಕಾರಿಗಳು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಕಾನೂನು ಸುವ್ಯವಸ್ಥೆಯನ್ನು ಪಾಲಿಸಬೇಕು. ಕೈಯಲ್ಲಿ ಅಧಿಕಾರವಿದೆ ಎಂದು ತಮಗೆ ಬೇಕಾದಂತೆ ವರ್ತಿಸುವುದು ಸರಿಯಲ್ಲವೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

