ಹಾವೇರಿ

ಬಿಎಸ್ವೈ ಇಲ್ದೆ ಅಧಿಕಾರಕ್ಕೇರಿ ತೋರಿಸ್ಲಿ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 24
ವ್ಯಕ್ತಿಗಿಂತ ಪಕ್ಷ ಮುಖ್ಯವೆಂದು ಬೊಗಳೆ ಬಿಡುತ್ತಿರುವ ರಾಷ್ಟ್ರೀಯ ಪಕ್ಷಗಳ ಮುಖಂಡರು, ನರೇಂದ್ರ ಮೋದಿಯಿಲ್ಲದೇ ಗುಜರಾತ್ನಲ್ಲಿ ಹಾಗೂ ಬಿಎಸ್ವೈ ಇಲ್ಲದೇ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ತೋರಿಸಲಿ ಎಂದು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಸವಾಲೆಸೆದರು.
ಬುಧವಾರ ಪಟ್ಟಣದಲ್ಲಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ನರೇಂದ್ರ ಮೋದಿ ತಮ್ಮ ಅಧಿಕಾರ ಅವಧಿಯಲ್ಲಿ ಸಾಧನೆ ಮಾಡದಿದ್ದರೆ, ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಬಿಜೆಪಿ ಮುಂದಾಗಿದ್ದೇಕೆ? ಮೋದಿಯವರು ಮಾಡಿದ ಸಾಧನೆಗಳು ಬಿಜೆಪಿ ಪ್ರಣಾಳಿಕೆಯಲ್ಲಿವೆಯೇ? ಕುಟುಂಬ ರಾಜಕಾರಣದಲ್ಲಿ ತೊಡಗಿರುವ ಕಾಂಗ್ರೆಸ್ ಗಾಂಧಿ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಬೇರೊಬ್ಬರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಿ ಚುನಾವಣೆ ಎದುರಿಸಲಿ ಎಂದು ಸವಾಲೆಸೆದರು.
ದೇಶ, ಸರ್ಕಾರ ಹಾಗೂ ಪಕ್ಷಗಳಿಗೆ ವ್ಯಕ್ತಿಗಳು ಅನಿವಾರ್ಯ. ದೇಶಕ್ಕೆ ಸ್ವಾತಂತ್ರ್ಯ ಪಡೆಯುವಲ್ಲಿ ಗಾಂಧೀಜಿ ಪಾತ್ರ ಬಹಳ ಮುಖ್ಯವಾಗಿದ್ದನ್ನು ಇಡೀ ವಿಶ್ವವೇ ಮರೆಯುವಂತಿಲ್ಲ. ಹೀಗಾಗಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್ವೈ ಮಾಡಿದ ಸಾಧನೆಯನ್ನು ಆ ಪಕ್ಷ ಅಸ್ತಿತ್ವದಲ್ಲಿರುವವರೆಗೂ ಮರೆಯಲು ಸಾಧ್ಯವಿಲ್ಲ ಎಂದರು.
ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ ಹಾಗೂ ಬಿಜೆಪಿಗಳು ಇತ್ತೀಚೆಗೆ ಜರುಗಿದ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿವೆ. ಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕೆಜೆಪಿ ಅಧಿಕಾರಕ್ಕೆ ಬರುವ ಮೂಲಕ ಆರನೇ ಸೋಲಿನ ರುಚಿ ತೋರಿಸಲಿದೆ ಎಂದರು.
ಲಕ್ಷ ಕೋಟಿಗೂ ಅಧಿಕ ಮೊತ್ತದ ಹಗರಣಗಳಲ್ಲಿ ಭಾಗಿಯಾಗಿರುವ ಕಾಂಗ್ರೆಸ್, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುವಂತೆ ಮಾಡಿದ್ದು ರಾಜ್ಯದ ಜನತೆಗೆ ಯಾವ ಮುಖ ತೋರಿಸಲಿದೆ ಎಂದು ಪ್ರಶ್ನಿಸಿದರು. ಚುನಾವಣೆ ಎದುರಿಸುತ್ತಿರುವ ಹಂತದಲ್ಲೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿಗಿಳಿದಿರುವುದು ನಾಚಿಕೆಗೇಡಿನ ಸಂಗತಿ ಎಂದರು.
ಮಾಜಿ ಶಾಸಕ ಸುರೇಶಗೌಡ ಮಾತನಾಡಿ, ಬಿಎಸ್ವೈ ನಾಯಕತ್ವ ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಈಚೆಗೆ ಕಾಂಗ್ರೆಸ್ನಲ್ಲಿ ಹೈಕಮಾಂಡ್ ಸೂಚಿಸಿದರೂ ಕನಿಷ್ಠ 80 ಸ್ಥಾನಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ ಎಂದು ಹೇಳಿದರು.
ಮುರಿಗೆಪ್ಪ ಶೆಟ್ಟರ, ಗಂಗಣ್ಣ ಎಲಿ, ಮಾಲತೇಶ್ ಬಣಕಾರ, ರಾಮಣ್ಣ ಕೋಡಿಹಳ್ಳಿ, ಚಂದ್ರಣ್ಣ ಶೆಟ್ಟರ್, ಬಸವರಾಜ ಛತ್ರದ, ರೋಹಿಣಿ ಹುಣಶೀಮರದ, ಪ್ರಶಾಂತ ಯಾದವಾಡ, ಹೇಮಾ ಸಜ್ಜನರ, ರಾಜೇಂದ್ರ ಸಜ್ಜನರ, ಗುಂಡೇಲಿಂಗ ಹೊಸಗೌಡ್ರ, ಬಸವರಾಜ ಹಂಜಿ ಇತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.