ಹಾವೇರಿ

ರಾಜ್ಯದ ಅಭಿವೃದ್ಧಿಗೆ ಕೆಜೆಪಿ ಮತ ನೀಡಿ

Published On :

ಹಿರೇಕೆರೂರು: ವಿಧಾನಸಭಾ ಕ್ಷೇತ್ರದ ಕೆಜೆಪಿ ಅಭ್ಯರ್ಥಿ, ಮಾಜಿ ಶಾಸಕ ಯು.ಬಿ. ಬಣಕಾರ ತಾಲೂಕಿನ ಮಾಸೂರಲ್ಲಿ ಪಾದಯಾತ್ರೆ ಮೂಲಕ ಮನೆ-ಮನೆಗೆ ತೆರಳಿ ಚುರುಕಿನಿಂದ ಮತಯಾಚಿಸಿದರು.  
ಕೆಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ಜೊತೆ ಮಾಸೂರು ಗ್ರಾಮದ  ಮತದಾರರ ಮನೆ ಮನೆಗೆ ತೆರಳಿ, ತೆಂಗಿನಕಾಯಿ ಚಿಹ್ನೆಗೆ ಮತ ಚಲಾಯಿಸುವಂತೆ ಮನವಿ ಮಾಡಿದರು.
ಕೆಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಕೆಜೆಪಿ ಬೆಂಬಲಿಸುವ ಮೂಲಕ ಪಕ್ಷವನ್ನು ಬಲಿಷ್ಠಗೊಳಿಸುವಂತೆ ಕೋರಿದರು.
ಮಾಜಿ ಶಾಸಕ ಯು.ಬಿ. ಬಣಕಾರ ಮಾತನಾಡಿ, ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಬಲವಾಗಿರುವುದರಿಂದ ಸಾಕಷ್ಟು ಅಭಿವೃದ್ಧಿ ಹೊಂದುತ್ತಿವೆ. ಅದೇ ರೀತಿ ರಾಜ್ಯದ ಎಲ್ಲ ಆಶೋತ್ತರಗಳನ್ನು ಈಡೇರಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾದೇಶಿಕ ಪಕ್ಷ ಕಟ್ಟಿದ್ದಾರೆ. ಕಾರಣ ಮತದಾರರು ನನ್ನನ್ನು ಬೆಂಬಲಿಸುವ ಮೂಲಕ ಕೆಜೆಪಿಯನ್ನು ಬಲಿಷ್ಠಗೊಳಿಸಬೇಕು ಎಂದರು.
ಮಾಜಿ ಸಿಎಂ ಬಿಎಸ್ವೈ ರೈತರ ರು. 25 ಸಾವಿರ ಸಾಲ ಮನ್ನಾ, ದೇಶದಲ್ಲೇ ಮೊದಲ ಬಾರಿಗೆ ಕೃಷಿ ಬಜೆಟ್ ಮಂಡನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.  ಇದರ ಫಲವಾಗಿ ತಾಲೂಕಿನ ಜನತೆ ಕೆಜೆಪಿಯತ್ತ ವಾಲುತ್ತಿದ್ದಾರೆಂದರು.
ಕೆಜೆಪಿ ತಾಲೂಕು ಅಧ್ಯಕ್ಷ ಮಹೇಶ ಗುಬ್ಬಿ, ಉಪಾಧ್ಯಕ್ಷ ವಿ.ಎಸ್. ಪುರದ, ಜಿಪಂ ಸದಸ್ಯೆ ಸುಜಾತಾ ಕೊಟಗಿಮನಿ, ತಾಪಂ ಉಪಾಧ್ಯಕ್ಷೆ ರೂಪಾ ಶಿವಾಜಿ ಆಡೂರ, ಗ್ರಾಪಂ ಅಧ್ಯಕ್ಷ ಚನ್ನಬಸಪ್ಪ ರಾಮಜ್ಜನವರ, ಉಪಾಧ್ಯಕ್ಷೆ ಲಕ್ಷ್ಮೀ, ಪಿಎಲ್ಡಿ ಬ್ಯಾಂಕ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಬುರಡಿಕಟ್ಟಿ, ಮಹೇಂದ್ರ ಬಡಳ್ಳಿ, ಲಿಂಗರಾಜ್ ಚಪ್ಪರದಹಳ್ಳಿ, ಮುಜೀಬ್, ಗುಲಾಬ್ಷಾ ಮಕಾಂದಾರ್, ರಮೇಶ ನ್ಯಾಮತಿ, ದತ್ತಾತ್ರೇಯ ರಾಯ್ಕರ್, ಎಂ.ಜಿ. ಮುಸ್ತಾ, ವಾಮನ್ ನಲವಾಡಿ, ರಾಮಾ ನಾಯ್ಕ, ವೆಂಕಟೇಶ ವಾಡೇರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.