ಹಾವೇರಿ

ಎಲ್ಲ ಗ್ರಾಮಗಳಿಗೂ ನೀರು: ಬೊಮ್ಮಾಯಿ

Published On :

ಚಾಕಾಪುರ: ಶಿಗ್ಗಾಂವಿ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡಬೇಕೆಂಬ ಉದ್ದೇಶ ತಾವು ಹೊಂದಿದ್ದು, ಇದನ್ನು ಸಾಕಾರಗೊಳಿಸಲು ಪ್ರಸಕ್ತ ಚುನಾವಣೆಯಲ್ಲಿ ತಮ್ಮ ಪರ ಮತ ನೀಡುವಂತೆ ಬಿಜೆಪಿ ಅಭ್ಯರ್ಥಿ, ಸಚಿವ ಬಸವರಾಜ ಬೊಮ್ಮಾಯಿ ವಿನಂತಿಸಿದರು.
ಗುರುವಾರ ಚಾಕಾಪುರ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ನಂತರ ಮಾತನಾಡಿ, ರೈತರ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತಹ ಶಿಗ್ಗಾಂವಿ ಏತ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದು ತೃಪ್ತಿ ತಂದಿದೆ ಎಂದರು. ಪ್ರತಿಪಕ್ಷ ಕಾಂಗ್ರೆಸ್‌ನ ಆರೋಪಗಳಿಗೆ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳೆ ಉತ್ತರಿಸಲಿವೆ ಎಂದ ಬೊಮ್ಮಾಯಿ, ತಾವು ಓಡಾಡುವ ರಸ್ತೆಯನ್ನೇ ಸುಧಾರಿಸಿಕೊಳ್ಳಲು ಸಾಧ್ಯವಾಗದ ಕಾಂಗ್ರೆಸ್‌ನ ಮಾಜಿ ಶಾಸಕರಿಂದ ಕ್ಷೇತ್ರದ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ಮತದಾರರ ಪ್ರಶ್ನೆಗೆ ಉತ್ತರಿಸಲು ಅವರು ನಿರುತ್ತರರಾಗಿದ್ದಾರೆ ಎಂದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಏನು ಎಂದು ಖಾರವಾಗಿ ಪ್ರಶ್ನಿಸಿದ ಬೊಮ್ಮಾಯಿ, ತಾವು ಕಳೆದ ಬಾರಿ ಕ್ಷೇತ್ರದಿಂದ ಆಯ್ಕೆಯಾದಾಗ ಬೆಟ್ಟದಷ್ಟು ಸವಾಲುಗಳಿದ್ದವು. ಅವೆಲ್ಲವನ್ನೂ ಪರಿಹರಿಸಿ ಕ್ಷೇತ್ರದ ಶ್ರೀಸಾಮಾನ್ಯ ವ್ಯಕ್ತಿಯೂ ಸ್ವಾಭಿಮಾನದ ಬದುಕು ಸಾಗಿಸುವಂತಾಗಬೇಕೆಂಬ ಉದ್ದೇಶ ಹೊಂದಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು. ಅಧಿಕಾರ ಶಾಶ್ವತವಲ್ಲ. ತಾವು ಕೈಗೊಂಡಿರುವ ಕಾಮಗಾರಿಗಳು ಶಾಶ್ವತ. ತಾಂತ್ರಿಕ ಕಾಲೇಜು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೂ ಸಾಕಷ್ಟು ಶ್ರಮಿಸಿದ್ದೇನೆ ಎಂದರು.
ದೇವಣ್ಣ ಚಾಕಲಬ್ಬಿ, ಎಸ್.ಕೆ. ಅಕ್ಕಿ, ಜಿಪಂ ಸದಸ್ಯ ಶಶಿಧರ ಹೊನ್ನಣ್ಣವರ, ತಾಪಂ ಅಧ್ಯಕ್ಷೆ ಉಷಾ ಬಿಳಿಕುದರಿ, ಸದಸ್ಯ ನಿಂಗಪ್ಪ ಹರಿಜನ ಮತ್ತಿತರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.