ಹಾವೇರಿ

ಉಜ್ಜನಗೌಡ ಪಾಟೀಲ್ ಕೆಜೆಪಿ ಸೇರ್ಪಡೆ

Published On :

ಹಾನಗಲ್ಲ: ತಾಲೂಕಿನ ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಜ್ಜನಗೌಡ ಪಾಟೀಲ್ ತಮ್ಮ ಬೆಂಬಲಿಗರೊಂದಿಗೆ ಸಿದ್ದರಾಮನಗೌಡ ಪಾಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ಕೆಜೆಪಿ ಅಭ್ಯರ್ಥಿ ಸಿ.ಎಂ. ಉದಾಸಿ ಸಮ್ಮುಖ ಕೆಜೆಪಿ ಸೇರಿದರು.
ಬಳಿಕ ಮಾತಾಡಿದ ಉಜ್ಜನಗೌಡ ಪಾಟೀಲ್, ಕಾಂಗ್ರೆಸ್‌ನಲ್ಲಿ ಸರಿಯಾಗಿ ಮಾರ್ಗದರ್ಶನ ನೀಡುವ ನಾಯಕತ್ವದ ಗುಣವಿರುವ ನಾಯಕ ಇಲ್ಲ. ಅನೇಕ ವರ್ಷಗಳಿಂದ ನಿಷ್ಠಾಂವತ ಕಾಂಗ್ರೆಸ್ಸಿಗನಾಗಿ ಸೇವೆ ಸಲ್ಲಿಸಿದ್ದೇನೆ. ಎರಡು ಬಾರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿಯೂ ಪಕ್ಷದ ಏಳ್ಗೆಗಾಗಿ ಶ್ರಮಿಸಿದ್ದೇನೆ. ಕಾಂಗ್ರೆಸ್ ನಾಯಕರು ನಮ್ಮಂಥ ಸಾತ್ವಿಕ, ಸಾಮಾನ್ಯ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಾ ಬಂದರು. ಸಮರ್ಥ ನಾಯಕತ್ವದ ಕೊರತೆಯೇ ಕಾಂಗ್ರೆಸ್ಸಿನ ದುರಂತ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಂಘಟಿಸುವ ನಿಟ್ಟಿನಲ್ಲಿ ಪಕ್ಷದ ನಾಯಕತ್ವವೇ ವಿಫಲವಾಗಿದೆ. ಇಂಥ ಸ್ಥಿತಿಯಲ್ಲಿರುವ ಕಾಂಗ್ರೆಸ್ಸಿನಿಂದ ಕ್ಷೇತ್ರದ ಅಭಿವೃದ್ಧಿ ಅಸಾಧ್ಯ. ಕಾಂಗ್ರೆಸ್  ಅಧೋಗತಿಗೆ ಸಾಗುತ್ತಿದೆ. ಮಾಜಿ ಸಚಿವ ಸಿ.ಎಂ. ಉದಾಸಿ ಕಾರ್ಯದಕ್ಷತೆಯಿಂದಾಗಿ ಬಹಳ ವರ್ಷಗಳಿಂದ ಹಾನಗಲ್ಲ ತಾಲೂಕಿನಾದ್ಯಂತ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ, ಅಕ್ಕಿಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿ ಕೆಜೆಪಿ ಸೇರಿದ್ದೇನೆ ಎಂದರು.
ಬಿ.ಎಸ್. ಅಕ್ಕಿವಳ್ಳಿ, ಎ.ಎಸ್. ಬಳ್ಳಾರಿ, ರಮೇಶ ಉಪ್ಪಾರ, ರಾಮಚಂದ್ರಪ್ಪ ಕಲ್ಲೇರ, ದುರ್ಗಪ್ಪ ಗೂರನವರ, ಎಸ್.ಕೆ. ಪೀರಜಾದೆ, ಹನುಮಂತಪ್ಪ ಶಿರಾಳಕೊಪ್ಪ, ರಾಮಣ್ಣ ಮತ್ತಿಹಳ್ಳಿ, ಕಲ್ಯಾಣಕುಮಾರ ಶೆಟ್ಟರ್, ಎಂ.ಜಿ. ಮುಂಡರಗಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.