ಕಾಂಗ್ರೆಸ್ನಿಂದ ನ್ಯಾಯ: ಬಸವರಾಜ ಶಿವಣ್ಣನವರ
ಬ್ಯಾಡಗಿ: ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಬಡವರು, ಕೃಷಿಕರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲ ವರ್ಗದವರಿಗೆ ನ್ಯಾಯ ಒದಗಿಸಲಾಗಿದೆ. ಕಾಂಗ್ರೆಸ್ನ್ನು ಅಧಿಕಾರಕ್ಕೆ ತರುವ ಮೂಲಕ ಪ್ರಣಾಳಿಕೆಗಳನ್ನು ಅನುಷ್ಠಾನಗೊಳಿಸಲು ಅನುಕೂಲ ಕಲ್ಪಿಸಿಕೊಡುವಂತೆ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಶಿವಣ್ಣನವರ ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಪಾದಯಾತ್ರೆಯ ಮೂಲಕ ಮತಯಾಚಿಸಿ ಬಳಿಕ ಅವರು ಮಾತನಾಡಿದರು. ಪ್ರತಿ ಕೆಜಿಗೆ ರು. 1ನಂತೆ ಅಕ್ಕಿ, ರೈತರಿಗೆ ನಿರಂತರ 8 ತಾಸು ವಿದ್ಯುತ್ ಪೂರೈಕೆಯಿಂದಾಗಿ ರಾಜ್ಯದ ಮತದಾರರು ಕಾಂಗ್ರೆಸ್ನ್ನು ಅಧಿಕಾರಕ್ಕೆ ತರಲಿದ್ದಾರೆ ಎಂದರು. ರಾಜ್ಯದ ಬಿಜೆಪಿ ನೇತೃತ್ವದ ಸರ್ಕಾರ ಹಲವಾರು ಯೋಜನೆಗಳಿಗೆ ನೀಡಿದ ಅನುದಾನವನ್ನು ಸಮರ್ಪಕ ಬಳಸಿಕೊಳ್ಳದಿರುವುದರಿಂದ ಜನತೆ ಇಂದು ಉದ್ಯೋಗವಿಲ್ಲದೆ ಗುಳೆ ಹೊರಟಿದ್ದಾರೆ ಎಂದು ದೂರಿದರು. ಹುಸೇನ್ಸಾಬ್ ದೊಡ್ಮನಿ, ದಾನಪ್ಪ ಚೂರಿ, ಎಸ್.ಸಿ. ಶಿಡೇನೂರ, ಎಸ್.ಎಸ್. ಬೆಲ್ಲದ, ಲಿಂಗಪ್ಪ ಕೊಂಬಳಿ, ನಾಗರಾಜ ಆನವೇರಿ ಇತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

