ಹಾವೇರಿ

ಅಕ್ರಮ ಮದ್ಯ: ಮಾಹಿತಿಗೆ ಸಾರ್ವಜನಿಕರಲ್ಲಿ ಮನವಿ

Published On :

ಹಾವೇರಿ: ಮೇ 5ರಂದು ನಡೆಯಲಿರುವ ಕರ್ನಾಟಕ ವಿಧಾಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ, ದಾಸ್ತಾನು ಮತ್ತು ಕಳ್ಳಬಟ್ಟಿ ಸಾರಾಯಿ ತಯಾರಿಕೆ ಹಾಗೂ ಮಾರಾಟದ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಅಕ್ರಮ ಮದ್ಯ ಸಾಗಾಟ, ಮಾರಾಟ, ದಾಸ್ತಾನು ಕಂಡುಬಂದಲ್ಲಿ ಕೂಡಲೇ ಹಾವೇರಿಯ ಅಬಕಾರಿ ಜಾರಿ ಮತ್ತು ಲಾಟರಿ ನಿಷೇಧ ದಳದ ವಿಶೇಷ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ (ಮೊ. 9449845032, ದೂ. 08375-233080) ಅಥವಾ ಪೊಲೀಸ್ ಉಪಾಧೀಕ್ಷಕರು, ಅಬಕಾರಿ ಜಾರಿ ಲಾಟರಿ ನಿಷೇಧ ವಿಭಾಗ, ಉತ್ತರ ವಲಯ ಬೆಳಗಾವಿ (ಮೊ. 9449845028), ಬೆಂಗಳೂರಿನ ಅಬಕಾರಿ ಜಾರಿ ಹಾಗೂ ಲಾಟರಿ ನಿಷೇಧ ವಿಭಾಗದ ಐಜಿಪಿ ಅವರ ಕಂಟ್ರೋಲ್ ರೂಮ್ (ಮೊ. 9449845066) ಗೆ ಮಾಹಿತಿ ನೀಡಬೇಕೆಂದು ಮನವಿ ಮಾಡಲಾಗಿದೆ. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.