ಕಾಂಗ್ರೆಸ್ನಿಂದ ಬಡವರ ತುಳಿತ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 28
ಹಿಂದುಳಿದ ವರ್ಗದ ಬಡ ಜನರು ಇನ್ನೂ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಎಂದಾದರೆ ಅದಕ್ಕೆ ಕಳೆದ 50 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ನಡೆಸಿದ ದುರಾಡಳಿತವೇ ಕಾರಣವೆಂದು ಕೆಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಆರೋಪಿಸಿದರು.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿಡೇನೂರಿನ ಸೇವಾನಗರ ತಾಂಡಾದಲ್ಲಿ ಮತಯಾಚನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಹಿಂದುಳಿದ ಹಾಗೂ ಅಲ್ಪಸಂಖ್ಯಾತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡ ಕಾಂಗ್ರೆಸ್ ಅವರ ಬದುಕನ್ನು ಕಸಿದುಕೊಂಡಿದ್ದಲ್ಲದೇ ಜೀವನವಿಡೀ ಕತ್ತಲೆಯಲ್ಲಿರುವಂತೆ ಮಾಡಿದೆ. ಅಲ್ಲೊಂದಿಲ್ಲೊಂದು ಸಹಾಯಧನ ನೀಡಿದ್ದನ್ನು ಬಿಟ್ಟರೆ ಹಿಂದುಳಿದವರ ಬದುಕು ಹಸನಾಗಿಸುವ ಯಾವುದೇ ಯೋಜನೆ ರೂಪಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಬಡತನದ ಬೇಗೆಯಲ್ಲಿರುವ ಹಿಂದುಳಿದವರು ಉತ್ತಮ ಸ್ತರಗಳನ್ನು ತಲುಪಲು ಸಾಧ್ಯವಾಗಿಲ್ಲ ಎಂದರು.
ಸಮಾನತೆ ಕಾಯ್ದ ಬಿಎಸ್ವೈ: ಬಿಎಸ್ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಹಿಂದುಳಿದ ವರ್ಗದ ಜನರು ವಾಸಿಸುವ ಪ್ರದೇಶಗಳಿಗೆ ಕುಡಿಯುವ ನೀರು, ಕಾಂಕ್ರಿಟ್ ರಸ್ತೆ, ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮುಂದಾಗಿದ್ದಲ್ಲದೇ ಬಿಎಸ್ವೈ ಕನಸು ರಾಜ್ಯದ ಎಲ್ಲ ಜನಾಂಗಗಳಿಗೆ ಸರಿಸಮಾನ ಆದ್ಯತೆ ನೀಡುವ ಮೂಲಕ ಜನಪರ ಆಡಳಿತ ನಡೆಸಿದ್ದಾರೆ ಎಂದರು.
ಲಂಬಾಣಿ (ಬಂಜಾರ) ತಾಂಡಾಗಳನ್ನು ಗುರುತಿಸುವ ಮೂಲಕ ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಭರವಸೆ ನೀಡಿದ ಅವರು ಇದರಿಂದ ಲಂಬಾಣಿ ಜನಾಂಗದ ಬಹುದಿನದ ಬೇಡಿಕೆ ಈಡೇರಿಸಿದಂತಾಗುತ್ತದೆ. ಅಲ್ಲದೇ ತಾಂಡಾಗಳಿಗೆ ಶಾಲೆ, ಗ್ರಂಥಾಲಯ, ಇನ್ನಿತರ ಸೌಲಭ್ಯ ಕಲ್ಪಿಸುವ ಮೂಲಕ ಶೈಕ್ಷಣಿಕ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು.
ಈ ಸಂದರ್ಭ ಕೆಜೆಪಿ ತಾಲೂಕಾಧ್ಯಕ್ಷ ಮುರಿಗೆಪ್ಪ ಶೆಟ್ಟರ, ಜಿಪಂ ಅಧ್ಯಕ್ಷ ಶಂಕ್ರಪ್ಪ ಮಾತನವರ, ಎಪಿಎಂಸಿ ಅಧ್ಯಕ್ಷ ರವೀಂದ್ರ ಪಟ್ಟಣಶೆಟ್ಟಿ, ಸಿದ್ಧಲಿಂಗಪ್ಪ ಮಲ್ಲಾಡದ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಸುರೇಶ ಯತ್ನಳ್ಳಿ, ತಿಮ್ಮಣ್ಣ ವಡ್ಡರ, ಚನ್ನವೀರಗೌಡ ಬುಡ್ಡನಗೌಡ್ರ, ವೀರಪ್ಪ ಲಮಾಣಿ, ವೆಂಕಪ್ಪ ಬಡಿಗೇರ, ಡಾಕಪ್ಪ ನಾಯಕ, ಶಂಕ್ರಣ್ಣ ಬಣಕಾರ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

