ಕಡ್ಡಾಯವಾಗಿ ಮತ ಚಲಾಯಿಸಿ: ಬಣಕಾರ
ಹಿರೇಕೆರೂರು: ಮೇ 5ರಂದು ಜರುಗಲಿರುವ ವಿಧಾನಸಭಾ ಚುನಾವಣೆಗೆ ಎಲ್ಲ ನಾಗರಿಕರು ಮತದಾನ ಮಾಡಿ ಚುನಾವಣೆ ಯಶಸ್ವಿಗೊಳಿಸಬೇಕು. ಕಡ್ಡಾಯವಾಗಿ ಮತ ಹಾಕಬೇಕು ಎಂದು ಗ್ರಾಪಂ ಕಾರ್ಯದರ್ಶಿ ಎಸ್.ಎಂ. ಬಣಕಾರ ತಿಳಿಸಿದರು. ಅವರು ತಾಲೂಕಿನ ಇಂಗಳಗೊಂದಿ ಗ್ರಾಪಂ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ಚುನಾವಣೆಯಲ್ಲಿ ಮತ ಕಡ್ಡಾಯವಾಗಿ ಮತದಾನ ಮಾಡುವ ಕುರಿತು ಜನಜಾಗೃತಿ ಜಾಥಾದಲ್ಲಿ ಮಾತನಾಡಿದರು. ರಾಷ್ಟ್ರದ ಪ್ರಜಾಪ್ರಭುತ್ವವನ್ನು ಬಲಗೊಳಿಸುವಲ್ಲಿ ನಾಗರಿಕರ ಕೊಡುಗೆ ಅಮೋಘವಾದದು, ಸದೃಢವಾದ ಹಾಗೂ ಬಹುಭಾಗಿತ್ವದ ಪ್ರಜಾಪ್ರಭುತ್ವವನ್ನು ಬಲಗೊಳಿಸುವುದು ಮುಖ್ಯವಾಗಿದೆ. ಕಾರಣ 18 ವರ್ಷ ಮಿರಿದ ಎಲ್ಲ ಮತದಾರರು ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಮನವಿ ಮಾಡಿದರು. ಮತದಾನ ಕುರಿತ ಘೋಷಣೆ ಮಾಡುವ ಬಿತ್ತಿ ಪತ್ರಗಳು ಹಾಗೂ ಬ್ಯಾನರಗಳೊಂದಿಗೆ ಗ್ರಾಮದ ಎಲ್ಲ ಬೀದಿಗಳಲ್ಲಿ ಸಂಚರಿಸಿ ಗ್ರಾಮದ ಮತದಾರರ ಗಮನ ಸೆಳೆದರು. ಜಾಥಾದಲ್ಲಿ ಗ್ರಾಮ ಸಹಾಯಕ ಲಿಂಗರಾಜ ಹೊಗೆಸೊಪ್ಪಿನವರ, ಶಿಕ್ಷಕಿ ಕೊಳ್ಳೇರ, ಅಂಗನವಾಡಿ ಕಾರ್ಯಕರ್ತೆ ಕಮಲಾ ಶಣಿಗಪ್ಪಳವರ ಹಾಗೂ ಅಂಗನಾಡಿ ಮತ್ತು ಪ್ರಾಥಮಿಕ ಶಾಲಾ ಮಕ್ಕಳು ಪಾಲ್ಗೊಂಡಿದ್ದರು.
ಸುಭದ್ರ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ
ಬ್ಯಾಡಗಿ: ರಾಜ್ಯದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದ ಬಿಜೆಪಿ ನಡುರಾತ್ರಿಯಲ್ಲಿ ಕೊಡೆ ಹಿಡಿದಂತೆ ವರ್ತಿಸುತ್ತಿದೆ. ದುರ್ಬಲ ಹೈಕಮಾಂಡ್ನಿಂದ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಿಲ್ಲ. ಸುಭದ್ರ ಹಾಗೂ ಸ್ವಚ್ಛ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಶಿವಣ್ಣನವರ ಕರೆ ನೀಡಿದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನ ಛತ್ರ ಗ್ರಾಮದಲ್ಲಿ ಚುನಾವಣೆ ಪ್ರಚಾರ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಅಭಿವೃದ್ಧಿಯ ಕುಂಟು ನೆಪ ಮುಂದೊಡ್ಡಿ ಸ್ವ-ಪಕ್ಷೀಯ ಶಾಸಕರ ಕುತಂತ್ರದಿಂದಾಗಿ 4 ಬಾರಿ ಬಿಜೆಪಿ ಸರ್ಕಾರ ಬೀಳಿಸುವ ಪ್ರಯತ್ನ ನಡೆದಿದ್ದು, ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದೆ. ಇಂತಹ ಹುಳುಕು ಮುಚ್ಚಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿರುವ ಬಿಜೆಪಿ ಮುಖಂಡರು ಮತ್ತೊಬ್ಬರ ತಪ್ಪನ್ನು ಹುಡುಕುವತ್ತ ಮಗ್ನರಾಗಿದ್ದಾರೆ ಎಂದರು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಆರಂಭವಾದ ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆ ಇಂದಿಗೂ ರೈತರಿಗೆ ನೀರು ಹರಿಸಿಲ್ಲ ಎಂದು ವಿಷಾದಿಸಿದರು. ಶೇಖಣ್ಣ ಮೈಲಾರ, ಷಣ್ಮುಕಪ್ಪ ಕುರಕುಂದಿ, ಸುಮಂಗಲಾ ರಾರಾವಿ, ರೇಣುಕಾ ಕನವಳ್ಳಿ, ಹುಸೇನಸಾಬ್ ದೊಡ್ಮನಿ, ರಮೇಶ ಸುತ್ತಕೋಟಿ, ದುರ್ಗೇಶ ಗೋಣೆಮ್ಮನವರ, ಮಂಜು ಭೋವಿ, ಸೋಮಣ್ಣ ಕರ್ಚಡ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

