ಮತದಾರರಿಗೆ ಮತದಾನ ಕುರಿತು ಜಾಗೃತಿ
ಹಾನಗಲ್ಲ: ಅರಳೇಶ್ವರ ಗ್ರಾಪಂ ಮತ್ತು ಶಿಶು ಅಭಿವೃದ್ಧಿ ಯೋಜನೆ ಇಲಾಖೆಯಿಂದ ಗ್ರಾಮದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.
ಮತದಾರರಿಗೆ ಮತದಾನದ ಅರಿವು ಮೂಡಿಸುವ ಘೋಷಣೆಗಳ ಮೂಲಕ ಗ್ರಾಮದ ಬೀದಿ ಬೀದಿಗಳಲ್ಲಿ ಸಂಚರಿಸಿ ಊರಿನ ನಾಗರಿಕರಿಗೆ ತಿಳಿಸಲಾಯಿತು. ಈ ಕಾರ್ಯಕ್ರಮದಲ್ಲಿ 40ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಊರಿನ ಪ್ರಮುಖ ಸ್ಥಳಗಳಲ್ಲಿ ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಅರಿವು ಮೂಡಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಿ.ಆರ್. ಶೆಟ್ಟರ್, ಪಿಡಿಓ ಎನ್.ಬಿ ಮುದ್ದೇರ್, ಸಾರ್ವಜನಿಕರಿಗೆ ಮತದಾನದ ಮಹತ್ವ ತಿಳಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ರೇಸಿದಾಬಾನು, ಅರಳೇಶ್ವರ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಪಿ.ಎಂ. ಚಲವಾದಿ, ಮತಗಟ್ಟೆ ಅಧಿಕಾರಿಗಳಾದ ಟಿ. ಶಿವಕುಮಾರ್, ಬಿ.ಎಂ. ಉದ್ದೇಗೌಡ್ರ ಮತ್ತು ಎಂ.ವೈ. ಝಂಡೇದ, ಪ್ರೇರಕ ಶಿವಾನಂದ ಹೋತನಹಳ್ಳಿ, ಶಶಿಕಲಾ ಹಂಚಿನಮನಿ, ಬಸವರಾಜ ಮಡಿವಾಳರ, ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ಬಿಜೆಪಿ ಬೆಂಬಲಿಸಿ: ವಿರೂಪಾಕ್ಷಪ್ಪ
ಬ್ಯಾಡಗಿ: ದೇಶದಲ್ಲಿ ಭ್ರಷ್ಟಾಚಾರ ಹುಟ್ಟು ಹಾಕಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಹೀಗಾಗಿ ಮತದಾರರು ಬಿಜೆಪಿ ಬೆಂಬಲಿಸುವಂತೆ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬ್ಯಾಡಗಿ ಮತಕ್ಷೇತ್ರದ ಕುರಬಗೊಂಡ, ಅಂಗರಗಟ್ಟಿ, ಹೊಂಬರಡಿ, ಅರಬಗೊಂಡ, ಕೆಂಗೊಂಡ, ಗುಂಡೇನಹಳ್ಳಿ ಗ್ರಾಮಗಳಲ್ಲಿ ಮತ ಯಾಚನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೇಂದ್ರದಲ್ಲಿ ಕಾಂಗ್ರೆಸ್ ರು. 3 ಲಕ್ಷ ಕೋಟಿಗೂ ಅಧಿಕವಾದ ಭ್ರಷ್ಟಾಚಾರದ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವಂತೆ ಮನವಿ ಮಾಡಿದರು.
ಬಂಗಾರಗೌಡ್ರ, ಹೊನ್ನಪ್ಪ ಮಾಸ್ತರ, ದೇಶಗತಿ, ಶಂಕ್ರಪ್ಪ, ನಿಂಗಪ್ಪ ಗುಂಡೆಣ್ಣನವರ, ಗ್ರಾಪಂ ಅಧ್ಯಕ್ಷ ಕೆಂಗನೂರ, ಮೌಲಾಸಾಬ ಜಾಲಿಮರದ, ಶಕೀರಹಮ್ಮದ್ ಮಾಳಿ, ಡಾಕಪ್ಪ ಲಮಾಣಿ, ಶಬ್ಬೀರ್ ಸಾಬ್ ಹಾದಿಮನಿ ಇನ್ನಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

