ಹಾವೇರಿ

ವಿಜ್ಞಾನ ಮೇಳದಿಂದ ವಿದ್ಯಾರ್ಥಿ ಪ್ರತಿಭೆ ಬೆಳಕಿಗೆ: ಪಾಟೀಲ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಆ. 2
ಮಕ್ಕಳ ಸುಪ್ತ ಪ್ರತಿಭೆ ಬೆಳಗಿಸಲು ವಿಜ್ಞಾನ ವಸ್ತು ಪ್ರದರ್ಶನ ಅವಶ್ಯವೆಂದು ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ ಪಾಟೀಲ ಹೇಳಿದರು.
ಸರ್ಕಾರಿ ಮಾದರಿ ಕೇಂದ್ರ ಶಾಲೆ ಕುಪ್ಪೇಲೂರು ಹಾಗೂ ಟಿಆರ್ಡಿಸಿ ಸಂಸ್ಥೆ ರಾಣಿಬೆನ್ನೂರು ಆಶ್ರಯದಲ್ಲಿ ಕುಪ್ಪೇಲೂರು ಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಹಣ ವ್ಯಯಿಸುತ್ತಿವೆ. ಶಿಕ್ಷಕರು ಮಕ್ಕಳ ಪ್ರತಿಭೆ ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದರು.
ಆ್ಯಕ್ಸಿಸ್ ಬ್ಯಾಂಕ್ ವ್ಯವಸ್ಥಾಪಕ ಎನ್.ಎಂ. ಸುಬ್ರಹ್ಮಣ್ಯಂ ಮಾತನಾಡಿ, ವಿಜ್ಞಾನದ ಕುರಿತು ಮಕ್ಕಳಲ್ಲಿ ಅರಿವು, ಆಸಕ್ತಿ ಮೂಡಿಸಬೇಕು ಎಂದು ತಿಳಿಸಿದರು.
ಕುಪ್ಪೇಲೂರು ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಫ್. ನಧಾಪ್, ಟಿಆರ್ಡಿಸಿ ಸಂಸ್ಥೆಯ ಸಂಯೋಜಕಿ ಗೀತಾ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಭಟ್ ವಿಜ್ಞಾನ ಪ್ರಯೋಗಾಲಯದ ಕುರಿತು ಉಪನ್ಯಾಸ ನೀಡಿದರು. ಕುಪ್ಪೇಲೂರು ಗ್ರಾಪಂ ಅಧ್ಯಕ್ಷ ರಂಗಪ್ಪ ಆಡಿನವರ, ಎಸ್ಡಿಎಂಸಿ ಅಧ್ಯಕ್ಷ ಕೊಟ್ರೇಶ ಅಂಗಡಿ, ಗುಡ್ಡಪ್ಪ ಕಜ್ಜರಿ, ಗಣೇಶ ಶಿಗ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.