ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸಭೆ
ಹಾನಗಲ್ಲ: ತಾಲೂಕಿನ ಗ್ರಾಪಂ ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಪದಾಧಿಕಾರಿಗಳ ಸಭೆ ತಾಪಂ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು.
ಒಕ್ಕೂಟದ ಅಧ್ಯಕ್ಷ ಶಿವಲಿಂಗಪ್ಪ ತಲ್ಲೂರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಐದು ವಿಷಯಗಳ ಕುರಿತು ನಿರ್ಣಯ ಕೈಗೊಳ್ಳಲಾಯಿತು. ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ ಕಡ್ಡಾಯವಾಗಿ ಗ್ರಾಮಸಭೆ ಮತ್ತು ವಾರ್ಡ್ ಸಭೆಗಳನ್ನು ಮಾಡುವಂತೆ ನಿರ್ಧರಿಸಲಾಯಿತು. ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಇರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ತಾಪಂ ಇಒಗೆ ಮನವಿ ಸಲ್ಲಿಸಲು ಸದಸ್ಯರು ತೀರ್ಮಾನಿಸಿದರು. ಗ್ರಾಪಂ ಸದಸ್ಯರ ಬಾಕಿ ಇರುವ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು. ಖಾತ್ರಿ ಯೋಜನೆ ಕಾಮಗಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನನಗೊಳ್ಳಲು ಸಹಾಯಕ ಎಂಜಿನಿಯರ್ಗಳು ಗ್ರಾಪಂ ಸದಸ್ಯರು ಹಾಗೂ ಅಧಿಕಾರಿಗಳ ಜತೆ ಕಾಲ ಕಾಲಕ್ಕೆ ಭೇಟಿ ನೀಡಿ ಸಹಕರಿಸಬೇಕೆಂದು ಸದಸ್ಯರು ನಿರ್ಣಯಿಸಿದರು. ಧಾರವಾಡ ಹಾಗೂ ಹಾವೇರಿ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಚುನಾವಣೆಯಲ್ಲಿ ತಾಲೂಕಿನ 40 ಗ್ರಾಪಂಗಳ 526 ಸದಸ್ಯರಿದ್ದು, ಒಕ್ಕೂಟಕ್ಕೆ ಹಾಗೂ ಗ್ರಾಪಂ ಸದಸ್ಯರ ಸಮಸ್ಯೆಗಳಿಗೆ ಸ್ಪಂದಿಸುವ, ಅಭಿವೃದ್ಧಿಪರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಭೆ ತೀರ್ಮಾನ ಕೈಗೊಂಡಿತು.
ಸಭೆಯಲ್ಲಿ ಒಕ್ಕೂಟದ ಕಾರ್ಯದರ್ಶಿ ಶಿವಾಜಿ ಸಾಳುಂಕೆ, ಖಜಾಂಚಿ ನಾಗರಾಜ ಕರೆಣ್ಣನವರ, ಕಾನೂನು ಸಲಹೆಗಾರ ರಮೇಶ ತಳವಾರ, ಸದಸ್ಯರಾದ ಬಸವರಾಜ ಕೂಡಲಮಠ, ಅಲ್ಮಾಸಬಾನು ಮುಂಡರಗಿ, ಮಂಜಪ್ಪ ಬುಡ್ಡನವರ, ಗಿರೀಶ ಬೂದಿಹಾಳ, ಎಂ.ಎಂ. ಮುಲ್ಲಾ, ಪ್ರಶಾಂತ ಪೂಜಾರ, ರತ್ನಮ್ಮ ಗುಡ್ಡದಮತ್ತಿಹಳ್ಳಿ, ಜಗದೀಶ ಗಂಟನವರ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

