ಹಾವೇರಿ

ಘಟನೆ, ಅನುಭವಗಳಿಂದ ಹೋರಾಟ ಮನೋಭಾವ: ಚೂರಿ

Published On :

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಆ. 6
ಯಾವುದೇ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಪ್ರೇರೇಪಿಸಲಿಲ್ಲ. ಬದುಕಿನ ಸಾಂದರ್ಭಿಕ ಘಟನೆಗಳು ಹಾಗೂ ಅನುಭವಗಳು ವ್ಯಕ್ತಿಯನ್ನು ಹೋರಾಟಗಾರರನ್ನಾಗಿ ರೂಪಿಸಲಿವೆ ಎಂದು ಮೋಟೆಬೆನ್ನೂರ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯ ಎನ್.ಎಸ್. ಚೂರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಎಸ್‌ಎಸ್‌ಪಿಎನ್ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಹಾಗೂ ಶಾಲಾ ಸಂಸತ್ತು ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಕ್ಷಣ ಜ್ಞಾನದ ಕಣಜವಾಗಿದ್ದು, ಜೀವನದ ಪ್ರತಿ ಹಂತದಲ್ಲೂ ನಡೆಯುವ ಎಲ್ಲ ಪ್ರಕ್ರಿಯೆಗಳ ಮೂರ್ತರೂಪವಾಗಿದೆ. ಶಿಕ್ಷಣ ವಿದ್ಯಾರ್ಥಿಗಳ ಬದುಕಿನ ಮಾರ್ಗಸೂಚಿಯಾದಾಗ ಮಾತ್ರ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಹೊರಹೊಮ್ಮಲು ಸಾಧ್ಯವೆಂದರು.
ಹೆಚ್ಚು ಅಂಕ ಪಡೆಯಬೇಕೆಂದು ಪಾಲಕರು ಮಕ್ಕಳ ಮೇಲೆ ಒತ್ತಡ ಹೇರುತ್ತಿರುವುದನ್ನು ಖಂಡಿಸಿದ ಅವರು, ಶಿಕ್ಷಣ ವ್ಯಕ್ತಿಯ ಸರ್ವಾಂಗೀಣ ಪ್ರಗತಿಯ ಏಕೈಕ ಮಾಧ್ಯಮ. ಶಿಕ್ಷಣವಿಲ್ಲದ ವ್ಯಕ್ತಿಯನ್ನು ಸಮಾಜದಲ್ಲಿ ಕೀಳು ಭಾವನೆಯಿಂದ ನೋಡಲಾಗುತ್ತಿದೆ ಎಂದರು.
ಬದುಕಿನ ಅರ್ಥವನ್ನು ಮಾನದಂಡವಾಗಿ ಇಟ್ಟುಕೊಂಡು ಶಿಕ್ಷಣವನ್ನು ಕಲ್ಪಿಸುವುದು ಇಂದಿನ ಅಗತ್ಯಗಳಲ್ಲಿ ಒಂದು. ಆದರೆ ಆಧುನಿಕ ಶಿಕ್ಷಣ ಪದ್ಧತಿಯಲ್ಲಿ ಇದು ಮಾಯವಾಗಿರುವುದು ಬೇಸರ ಮೂಡಿಸುತ್ತಿದೆ. ಪಠ್ಯ ಕ್ರಮದ ಜತೆಗೆ ವೃತ್ತಿ ಶಿಕ್ಷಣ ನೀಡಿದಲ್ಲಿ ವಿದ್ಯಾರ್ಥಿಗಳ ಸ್ವಾವಲಂಬಿ ಬದುಕಿಗೆ ಇನ್ನಷ್ಟು ಸಹಕಾರಿಯಾಗಲಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಚಂದ್ರಣ್ಣ ಶೆಟ್ಟರ ಮಾತನಾಡಿ, ಸಾಧನೆಯ ಮಾರ್ಗದಲ್ಲಿರುವ ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ನಾಯಕತ್ವ ಗುಣಗಳನ್ನು ಹುಟ್ಟುಹಾಕಲು, ಬೆಳೆಸಲು ಹಾಗೂ ಯೋಜನೆ ಸರಿಯಾದ ರೀತಿಯಲ್ಲಿ ಕಾರ್ಯಗತಗೊಳಿಸಲು ಶಾಲಾ ಸಂಸತ್ತು  ಸಹಕಾರಿಯಾಗಿದೆ ಎಂದರು.
ವೇದಿಕೆಯಲ್ಲಿ ಪ್ರಾಚಾರ್ಯ ಎಲ್.ವಿ. ಮಾಯೇರ, ಉಪ ಪ್ರಾಚಾರ್ಯ ಎಂ.ಕೆ. ಹೊಸಮನಿ, ಎಸ್.ಯು. ಲೋಣಿಮಠ, ಮೃತ್ಯುಂಜಯ ನೆಲವಿಗಿ, ಬಿ.ಎಫ್. ದೊಡ್ಡಮನಿ ಉಪಸ್ಥಿತರಿದ್ದರು. ಎಸ್.ಕೆ. ಆರಾಧ್ಯಮಠ ಹಾಗೂ ಜಿ.ಎಚ್. ಸುಮಂಗಲಾ ಪ್ರಮಾಣವಚನ ಬೋಧಿಸಿದರು. ಅನ್ನಪೂರ್ಣಾ ಕರ್ಜಗಿ ಸ್ವಾಗತಿಸಿದರು, ಬಿ.ಕೆ. ಹೆಡಿಯಾಲ ವಂದಿಸಿದರು. ಎಂ.ಕೆ. ಬಳ್ಳಾರಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.