ಹಾವೇರಿ

ಸಮರ್ಪಕ ಬಸ್ ವ್ಯವಸ್ಥೆ: ಎಸ್‌ಎಫ್‌ಐ ಮನವಿ

Published On :

 ಹಾನಗಲ್ಲ: ಭಾರತ ವಿದ್ಯಾರ್ಥಿ ಫೆಡರೇಷನ್ ಹಾನಗಲ್ಲ ತಾಲೂಕು ಘಟಕದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗಾಗಿ ಒತ್ತಾಯಿಸಿ ತಹಸೀಲ್ದಾರ್‌ಗೆ ಮನವಿ ಅರ್ಪಿಸಿದ್ದಾರೆ.
ಮಂಗಳವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು, ತಾಲೂಕಿನಲ್ಲಿ 5 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬಸ್‌ಗಳ ಮೂಲಕ ವಿವಿಧ ಶಾಲೆ, ಕಾಲೇಜುಗಳಿಗೆ ಓಡಾಡುತ್ತಾರೆ. ಆದರೆ ಸಕಾಲಿಕವಾಗಿ ಬಸ್ ವ್ಯವಸ್ಥೆ ಇಲ್ಲದ ಕಾರಣ ವರ್ಗಗಳಿಗೆ ಹಾಜರಾಗಲು ತೊಂದರೆ ಆಗುತ್ತಿದೆ. ಕೂಡಲೇ ಈ ಸಮಸ್ಯೆಗೆ ಪರಿಹಾರ ದೊರಕಬೇಕು. ವಿದ್ಯಾರ್ಥಿ ಮುಖಂಡರನ್ನು ಕರೆದು, ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ಈ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಹಾಲಿ ಓಡಾಡುವ ಬಸ್‌ಗಳು ಕೂಡ ಸುಸ್ಥಿತಿಯಲ್ಲಿಲ್ಲ. ವಿದ್ಯಾರ್ಥಿಗಳು ಭಯದಲ್ಲಿಯೇ ಪ್ರಯಾಣ ಮಾಡುವಂತಾಗಿದೆ. ಕೂಡಲೇ ಬಸ್ ಪ್ರಯಾಣದ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿದ್ದಾರೆ.
ನಗರದಲ್ಲಿ ಪ್ರತಿಭಟನೆ ನಡೆಸಿ, ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಮುಖಂಡರಾದ ವಿನಾಯಕ ಕುರುಬರ, ಸುಭಾಸ ಮಾದರ, ಪ್ರಕಾಶ ಹೊಸಮನಿ, ಅಜರುದ್ದೀನ ಹರವಿ, ಭರಮಗೌಡ ಪಾಟೀಲ, ಮಂಜುನಾಥ ಗುಳೇದ, ಶಶಿಧರ, ಜೈನುಲ್ಲಾ ಭಾಷಾ, ಬಸವರಾಜ, ಶಿವರಾಜ, ಕರಬಸವರಾಜ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.