ಹಾವೇರಿ

ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ಡಾ. ರಾಜಶೇಖರ ದಾನರಡ್ಡಿ

Published On :

ಹೊಳೆಆಲೂರ: ವಿದ್ಯಾರ್ಥಿಗಳ ದೈಹಿಕ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆ ಸಹಕಾರಿಯಾಗಿದ್ದು, ಪ್ರತಿಯೊಬ್ಬರೂ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಗದಗನ ಪಿಪಿಜಿ ಮಹಾವಿದ್ಯಾಲಯದ ಡಾ. ರಾಜಶೇಖರ ದಾನರಡ್ಡಿ ಹೇಳಿದರು. ಈಚೆಗೆ ಅವರು ಸ್ಥಳೀಯ ಕಲ್ಮೇಶ್ವರ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ 2013-14ನೇ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ಬಿಎ, ಬಿಕಾಂ, ಬಿಎಸ್‌ಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಅಮೂಲ್ಯವಾಗಿದ್ದು, ಬದುಕನ್ನು ಕಟ್ಟಿಕೊಳ್ಳಲು ಉತ್ತಮ ಹಂತವೇ ಕಾಲೇಜು ಶಿಕ್ಷಣವಾಗಿದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಧೈರ್ಯ ಹಾಗೂ ಸ್ಪರ್ಧಾತ್ಮಕ ಗುಣಗಳಿಂದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಿ ಉತ್ತಮ ವ್ಯಕ್ತಿತ್ವವನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಚನ್ನಪ್ಪ ಬೀರನೂರ ಮಾತನಾಡಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ವಿ.ಎಲ್. ಬದಾಮಿ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಡಾ.ಎಂ. ಕಡಪಟ್ಟಿ ಮುಂತಾದವರು ಉಪಸ್ಥಿತರಿದ್ದರು. ಗೀತಾ ಹಡಪದ ಪ್ರಾರ್ಥಿಸಿದರು. ಪ್ರಾಚಾರ್ಯ ಎಸ್.ಎಸ್.ಪಟ್ಟಣಶೆಟ್ಟಿ ಸ್ವಾಗತಿಸಿದರು. ಎಸ್.ಡಿ. ಪಾಟೀಲ ನಿರೂಪಿಸಿದರು. ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಎನ್.ಎಂ. ನೀಲಗುಂದ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.