ಹಾವೇರಿ

ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡಲ್ಲ

Published On :

ಹಾವೇರಿ: ಬಿಎಸ್‌ವೈ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದಲ್ಲಿ ಆಗಿರುವಷ್ಟು ಅಭಿವೃದ್ಧಿ ಕಾರ್ಯಗಳು ಬೇರಾವ ಸರ್ಕಾರದಿಂದಲೂ ಆಗಿಲ್ಲ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಬಿಜೆಪಿ ಹಾಗೂ ಕೆಜೆಪಿ ಒಂದಾಗಬೇಕು ಎಂಬುದು ಮತದಾರನ ಆಸೆಯೂ ಆಗಿದೆ. ಹುಬ್ಬಳ್ಳಿ-ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬೆಂಬಲಿಸಿ. ಕಾರ್ಯಕರ್ತರಿಗೆ ಅನ್ಯಾಯವಾಗದಂತೆ, 3 ಜಿಲ್ಲೆಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ್ನಿಸುವೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಮವಾರ ಮಧ್ಯಾಹ್ನ ನಗರದಲ್ಲಿ ಆಯೋಜಿಸಲಾಗಿದ್ದ ಕೆಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕ ಯು.ಬಿ. ಬಣಕಾರ, ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಮತದಾರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಆದ್ದರಿಂದ ಕೆಜೆಪಿ ನಾಯಕರಾದ ಬಿಎಸ್‌ವೈ ಹಾಗೂ ಸಿ.ಎಂ. ಉದಾಸಿ ಅವರ ಆದೇಶದಂತೆ ನಾವೆಲ್ಲರೂ ನಡೆದುಕೊಳ್ಳುವ ಮೂಲಕ ಯಡಿಯೂರಪ್ಪ ಕೈ ಬಲಪಡಿಸೋಣ ಎಂದರು.
ಮಾಜಿ ಶಾಸಕರಾದ ಜಿ. ಶಿವಣ್ಣ, ನೆಹರು ಓಲೇಕಾರ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ ಮಾತನಾಡಿದರು. ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ, ಬಿಜೆಪಿ ಜಿಲ್ಲಾಧ್ಯಕ್ಷ ಮೈಲಾರಪ್ಪ ಗುಡಗೂರ, ಜಿಪಂ ಉಪಾಧ್ಯಕ್ಷೆ ಗೀತಾ ಅಂಕಸಖಾನಿ, ತಾಪಂ ಅಧ್ಯಕ್ಷೆ ರೀಹಾನ್ ಬೇಗ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.