ಪರಿಸರ ಸ್ವಚ್ಛತೆ ಸಾಮೂಹಿಕ ಜವಾಬ್ದಾರಿ: ಮುರಿಗೆಪ್ಪ ಶೆಟ್ಟರ
ಬ್ಯಾಡಗಿ: ಎಲ್ಲದಕ್ಕೂ ಆಡಳಿತ ವ್ಯವಸ್ಥೆಯನ್ನು ಮೂದಲಿಸುವ ಬದಲು ಸಮುದಾಯದ ಸಹಭಾಗಿತ್ವದಲ್ಲಿ ಸಾಮೂಹಿಕ ಜವಾಬ್ದಾರಿಯಿಂದ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ನಾಗರಿಕ ಪ್ರಜ್ಞೆ ಮೆರೆಯಿರಿ ಎಂದು ಜನಜಾಗೃತಿ ವೇದಿಕೆ ಅಧ್ಯಕ್ಷ ಮುರಿಗೆಪ್ಪ ಶೆಟ್ಟರ ಕರೆ ನೀಡಿದರು.
ಪಟ್ಟಣದ ಮುಪ್ಪಿನೇಶ್ವರ ಮಠದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕ ಘಟಕ ನೀರು ನೈರ್ಮಲ್ಯ ಕಾರ್ಯಕ್ರಮದ ಸಹಭಾಗಿತ್ವದಲ್ಲಿ ನಾಗರಿಕ ಪ್ರಜ್ಞೆ ಮತ್ತು ಸ್ವಚ್ಛತಾ ದಿನಾಚರಣೆ ಜಾಥಾದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಾರ್ವಜನಿಕರು ಮಾಡುವ ಸಣ್ಣ ತಪ್ಪು ಇಡೀ ವಾತಾವರಣ ಹಾಳು ಮಾಡುತ್ತದೆ. ಆನುನಂಶಿಕ ಕಾಯಿಲೆಗಳಿಂದ ಸಾಂಕ್ರಾಮಿಕ ರೋಗಗಳು ಹೆಚ್ಚು ಅಪಾಯಕಾರಿ. ನಮ್ಮ ಪರಿಸರದಲ್ಲಿ ಕಸ ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ತಹಸೀಲ್ದಾರ್ ಸುಭಾಸ ಪುಲಾರೆ ಮಾತನಾಡಿ, ಪರಿಸರ ನೈರ್ಮಲ್ಯದ ಕುರಿತು ಮತ್ತೊಬ್ಬರನ್ನು ದೂಷಿಸುವುದು ಸರಿಯಲ್ಲ. ನಮ್ಮ ಜವಾಬ್ದಾರಿ ಅರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸರ್ಕಾರದಿಂದ ಆಗದಿರುವ ಕೆಲಸಗಳನ್ನು ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನಿಭಾಯಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದರು.
ಪುರಸಭೆ ಮುಖ್ಯಾಧಿಕಾರಿ ಹಾಳಕಲ್ಲಾಪುರ, ಬೆಳೆಯುತ್ತಿರುವ ನಗರ ಮತ್ತು ಜನಸಂಖ್ಯೆಯಿಂದ ನೈರ್ಮಲ್ಯ ಕಾಪಾಡುವಲ್ಲಿ ಹಿನ್ನಡೆಯಾಗಿದೆ, ಮನೆಯಂತೆ ಪರಿಸರವನ್ನೂ ಸ್ವಚ್ಛವಾಗಿಟ್ಟುಕೊಳ್ಳಿ ಎಂದರು.
ಹಳೆ ಪುರಸಭೆಯಿಂದ ಆರಂಭವಾದ ನೈರ್ಮಲ್ಯ ಜಾಗೃತಿ ಜಾಥಾ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮುಪ್ಪಿನೇಶ್ವರ ಮಠ ತಲುಪಿತು. ನೈರ್ಮಲ್ಯದ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಲಾಯಿತು. ಸ್ವಸಹಾಯ ಗುಂಪುಗಳ ಸದಸ್ಯರು ಪಾಲ್ಗೊಂಡಿದ್ದರು. ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಗಣೇಶ್ ಮರಾಠೆ, ಚಂದ್ರಶೇಖರ, ವಸಂತ ಗೌಡ ಉಪಸ್ಥಿತರಿದ್ದರು. ಫಕ್ಕೀರೇಶ್ ಸ್ವಾಗತಿಸಿದರು, ನಾಗೇಶ್ ನಿರೂಪಿಸಿದರು, ವೀರಣ್ಣ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

