ಹಾವೇರಿ

ಮೈಲಾರ ಮಹದೇವ ಸಮಾಧಿಗೆ ಪುಷ್ಪನಮನ

Published On :

ಹಾವೇರಿ: ಇಲ್ಲಿನ ವೀರಸೌಧದಲ್ಲಿ ಶ್ರೀ ಮೈಲಾರ ಮಹದೇವ ಪ್ರತಿಷ್ಠಾನ, ಕಟಕೋಳ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ 67ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಹುಕ್ಕೇರಿಮಠದ ಶ್ರೀ ಸದಾಶಿವ ಮಹಾಸ್ವಾಮೀಜಿ ಹಾಗೂ ಹಾವೇರಿ ಹೊಸಮಠದ ಶ್ರೀ ಬಸವಶಾಂತಲಿಂಗ ಶ್ರೀ ಹುತಾತ್ಮ ಮಹದೇವ ಮೈಲಾರ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಕಟಕೋಳ ಟ್ರಸ್ಟ್‌ನ ಅಧ್ಯಕ್ಷ ನಾಗೇಂದ್ರ ಪ್ರ. ಕಟಕೋಳ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಸತೀಶ ಕುಲಕರ್ಣಿ, ಪ್ರೊ೤ ಎಸ್.ಎನ್. ತಿಪ್ಪನಗೌಡ್ರ, ಪ್ರೊ೤ ವಿ.ಎನ್. ತಿಪ್ಪನಗೌಡ್ರ, ನಗರಸಭೆ ಮಾಜಿ ಅಧ್ಯಕ್ಷೆ ಮಂಜುಳಾ ಕರಬಸಮ್ಮನವರ, ಪರಮೇಶಪ್ಪ ಮೈಲಾರ, ಚಂದ್ರಶೇಖರ ಶಿಸನಳ್ಳಿ, ವಕೀಲ ಎಸ್.ಆರ್. ಹೆಗಡೆ ಇದ್ದರು. ಆದರ್ಶ ಐಟಿಐ ಸಿಬ್ಬಂದಿ ಇದ್ದರು. ವಿ.ಎನ್. ಕುಲಕರ್ಣಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.