ಸುದ್ದಿ ಸಂಕ್ಷೇಪ
ಹಾನಗಲ್ಲ: ನಾಗರಾಜ ಛಬ್ಬಿ ಮತಯಾಚನೆ ಇಂದು
ಹಾನಗಲ್ಲ: ಸ್ಥಳೀಯ ಸಂಸ್ಥೆಗಳ ವಿಭಾಗದಿಂದ ಗದಗ, ಹಾವೇರಿ, ಧಾರವಾಡ ಜಿಲ್ಲೆಗಳ ಕ್ಷೇತ್ರದ ವಿಧಾನ ಪರಿಷತ್‌ಗೆ ಆ. 22ರಂದು ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಆ. 18ರಂದು ಹಾನಗಲ್ಲ ತಾಲೂಕಿನಲ್ಲಿ ಮತ ಯಾಚಿಸಲಿದ್ದಾರೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಹಾನಗಲ್ಲಿನ ಅಲ್-ಅರಮಾನ್ ಕಲ್ಯಾಣ ಮಂಟಪದಲ್ಲಿ ಹಾಗೂ 12 ಗಂಟೆಗೆ ಅಕ್ಕಿಆಲೂರಿನ ಮುತ್ತಿನಕಂತಿಮಠ ಕಲ್ಯಾಣ ಮಂಟಪದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪುರಸಭೆ ಕಾಂಗ್ರೆಸ್ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಛಬ್ಬಿ ಅವರನ್ನು ಬೆಂಬಲಿಸಬೇಕೆಂದು ಪಕ್ಷದ ಪ್ರಕಟಣೆ ತಿಳಿಸಿದೆ. ಸಭೆಯಲ್ಲಿ ಪಕ್ಷದ ಅಭ್ಯರ್ಥಿ ನಾಗರಾಜ ಛಬ್ಬಿ ಹಾಗೂ ಶಾಸಕ ಮನೋಹರ ತಹಸೀಲ್ದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿರುವರು. ಸ್ಥಳೀಯ ಸಂಸ್ಥೆಗಳ ಸದಸ್ಯರು ತಪ್ಪದೇ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ವಕ್ತಾರ ಕೆ.ಎಲ್. ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಅರ್ಚಕರ ಸಭೆ
ಹಿರೇಕೆರೂರು: ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ-ಆಗಮಿಕರ ಸಂಘ, ಉಪಾಧಿವಂತರ ಒಕ್ಕೂಟ, ಬೆಂಗಳೂರು ತಾಲೂಕು ಅರ್ಚಕರ ಹಾಗೂ ಪೂಜಾರರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ತಾಲೂಕು ಸಮಾವೇಶ ಆ. 18ರಂದು ಬೆಳಗ್ಗೆ 10.30ಕ್ಕೆ ಪಟ್ಟಣದ ಬಯಲು ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿದೆ. ಶಾಸಕ ಯು.ಬಿ. ಬಣಕಾರ ಉದ್ಘಾಟಿಸುವರು. ಹಿರೇಕೆರೂರು ತಾಲೂಕು ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪರಮೇಶಪ್ಪ ಹೂಗಾರ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪೂಜಾರರ ಸಂಘದ ರಾಜ್ಯಾಧ್ಯಕ್ಷ ಮಳ್ಳೂರ ಆನಂದ ರಾವ್, ಉಪಾಧ್ಯಕ್ಷ ಎಸ್.ಆರ್. ಶೇಷಾದ್ರಿ ಭಟ್, ಪ್ರಧಾನ ಕಾರ್ಯದರ್ಶಿ ಕೆ.ಎಸ್. ದೀಕ್ಷಿತ, ರಾಜ್ಯ ಕೋಶಾಧ್ಯಕ್ಷ ಬಿ.ಎಸ್. ಅನಂತ, ಸಂಘದ ಕಾನೂನು ಸಲಹೆಗಾರ ಎಸ್.ಆರ್. ಅಂಗಡಿ, ಜಿಪಂ ಸದಸ್ಯೆ ಬಸಮ್ಮ ಅಬಲೂರ ಹಾಗೂ ವಿವಿಧ ತಾಲೂಕುಗಳ ಅಧ್ಯಕ್ಷರು ಹಾಗೂ ಸದಸ್ಯರು ಪಾಲ್ಗೊಳ್ಳುವರೆಂದು ಸಂಘಟನಾ ಕಾರ್ಯದರ್ಶಿ ವಿಜಯ ಪೂಜಾರ ತಿಳಿಸಿದ್ದಾರೆ.
ಧ್ವಜಾರೋಹಣ
ರಾಣಿಬೆನ್ನೂರು: ನಗರದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿ ಎದುರು 67ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ. ಚಿರಂಜೀವಿ ಧ್ವಜಾರೋಹಣ ನೆರವೇರಿಸಿದರು. ಗದ್ದಿಗೆಪ್ಪ ನೇಶ್ವಿ, ಗುರುರಾಜ ವೆಂ. ಶಿರಹಟ್ಟಿ, ಮಂಜುನಾಥ ಕುಂಬಳೋರು, ಜಿ.ಎಲ್. ನಾಡಿಗೇರ, ಮಾರುತಿ ಮರಾಠ ಇತರರು ಉಪಸ್ಥಿತರಿದ್ದರು.
ಸಕ್ಕಮ್ಮ ನಿಧನ
ಶಿಗ್ಗಾಂವಿ: ತಾಲೂಕಿನ ಹುಲಸೊಗ್ಗಿ ಗ್ರಾಮದ ಸಕ್ಕಮ್ಮ ಭೀಮಪ್ಪ ಗಾಜುನವರ (90) ಶನಿವಾರ ಮೃತರಾದರು. ಮೃತರು ಐದು ಜನ ಗಂಡು, ನಾಲ್ಕು ಜನ ಹೆಣ್ಣು ಮಕ್ಕಳು, ಅಪಾರ ಬಂಧು-ಬಳಗದಿಂದ ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

