ಬಿಜೆಪಿಗೆ ಪಕ್ಷೇತರ ಅಭ್ಯರ್ಥಿ ಬಸವರಾಜ ಹಾದಿ ಬೆಂಬಲ
ಹಾವೇರಿ: ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್ಗೆ ನಡೆಯಲಿರುವ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಸವರಾಜ ಹಾದಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ಅವರ ಸಮ್ಮುಖದಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ಗೆ ತಮ್ಮ ಬೆಂಬಲ ಸೂಚಿಸಿದರಲ್ಲದೇ ಈ ವಿಷಯವನ್ನು ಮಾಧ್ಯಮದವರ ಎದುರು ಬಹಿರಂಗ ಪಡಿಸಿದರು. ನಂತರ ಪತ್ರಕರ್ತರೊಂದಿಗೆ ಬಸವರಾಜ ಹಾದಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ತಮಗೆ ಜೆಡಿಎಸ್ ಪಕ್ಷವೂ ಬೆಂಬಲ ಸೂಚಿಸಿತ್ತು. ಇದೀಗ ಬಿಜೆಪಿಗೆ ಬೆಂಬಲಿಸುತ್ತಿರುವುದಾಗಿ ತಿಳಿಸಿದರಲ್ಲದೇ, ತಾವು ಬಿಜೆಪಿಗೆ ಬೆಂಬಲಿಸುವುದಕ್ಕೆ ಜೆಡಿಎಸ್ ಕೂಡಾ ಸಮ್ಮತಿ ಸೂಚಿಸಿದೆ. ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಮಾಳಗಿ ಬಿಜೆಪಿಗೆ ಬೆಂಬಲಿಸುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಬಿಜೆಪಿಗೆ ಬೆಂಬಲಿಸುತ್ತಿರುವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

