ಹಾವೇರಿ

ಶಿವಕುಮಾರ್‌ಗೆ 'ಸಮಾಜ ಸೇವಾ ಭಾರ್ಗವ' ಪ್ರಶಸ್ತಿ

Published On :

ಹಾನಗಲ್ಲ: ತಾಲೂಕಿನ ಅರಳೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ಲೇಖಕ ಟಿ. ಶಿವಕುಮಾರ್ ಅವರನ್ನು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರದ ಗಣನೀಯ ಸೇವೆ ಪರಿಗಣಿಸಿ 'ಸಮಾಜ ಸೇವಾ ಭಾರ್ಗವ' ಪ್ರಶಸ್ತಿ ನೀಡಿ ಗೌರವಿಸಿದೆ.
ಹೊಸಪೇಟೆಯ ಶ್ರೀ ಶಂಕರ ಸಾಹಿತ್ಯ ಪರಿಷತ್ತು ಕಲೆ, ಸಾಹಿತ್ಯ, ರಂಗಭೂಮಿ, ಕ್ರೀಡೆ ಮುಂತಾದ ಕ್ಷೇತ್ರಗಳ ಸಾಧಕರನ್ನು ಗುರುತಿಸಿ, ಪ್ರಶಶ್ತಿ ನೀಡುತ್ತಿದ್ದು, ಈ ಬಾರಿ ಸಾಹಿತ್ಯ ಕ್ಷೇತ್ರದ ಸೇವೆಗಾಗಿ ಟಿ. ಶಿವಕುಮಾರ್‌ಗೆ ಈ ಪ್ರಶಸ್ತಿ ಪ್ರದಾನ ಮಾಡಿದೆ.
ಟಿ. ಶಿವಕುಮಾರ್ ಈಗಾಗಲೇ ಬಿ.ಜಿ. ಬಣಕಾರ ದತ್ತಿಪ್ರಶಸ್ತಿ, ಬಸವಜೋತಿ ಪ್ರಶಸ್ತಿ, ತಾಲೂಕು ಉತ್ತಮ ಶಿಕ್ಷಕ ಪ್ರಶಸ್ತಿ, ಬಸವಭೂಷಣ ಪ್ರಶಸ್ತಿ ಪಡೆದಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಸಾಹಿತಿ, ಚಿಂತಕ ಪ್ರೊ೤ ಯು. ರಾಘವೇಂದ್ರ ರಾವ್, ಎಚ್.ಎಂ. ಕಲ್ಲಂಭಟ್, ಬಿ.ಎಸ್. ಭಾಸ್ಕರ್ ರಾವ್, ವಿಷ್ಣುತೀರ್ಥ ಕಲ್ಲೂರಕರ್, ಎಸ್.ಎಂ. ರವಿಕಾಂತ್, ಮಯೂರನಾಥ್ ಅಯ್ಯರ್, ವಿಜಯಕುಮಾರ್ ಹಿರೇಮಠ, ಮಹಿಳಾ ಸಮಾಜ ಶಾಲೆ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.