ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಮತ ಯಾಚನೆ
ಶಿಗ್ಗಾಂವಿ: ಅಖಂಡ ಧಾರವಾಡ ಕ್ಷೇತ್ರದ ವಿಧಾನ ಪರಿಷತ್ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ ಛಬ್ಬಿ ಅವರ ಪರವಾಗಿ ತಾಲೂಕಿನ ಅತ್ತಿಗೇರಿ ಗ್ರಾಪಂ ಸದಸ್ಯರಲ್ಲಿ ಮತ ಯಾಚನೆ ಮಾಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಜನಪರ, ದೀನ-ದಲಿತರ, ಬಡವರ ಪರವಾಗಿ ಕಾರ್ಯಕ್ರಮ ಹಮ್ಮಿಕೊಂಡು, ಉತ್ತಮ ಬಜೆಟ್ ನೀಡಿದ್ದಾರೆ ಎಂದು ಮುಖಂಡರು ವಿವರಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಶಿವಾನಂದ ರಾಮಗಿರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುರುನಗೌಡ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ವೈ. ಪಾಟೀಲ್, ರಾಜ್ಯ ಎಸ್ಟಿ ಕಾರ್ಯದರ್ಶಿ ಪ್ರಕಾಶ ಹಾದಿಮನಿ, ಗ್ರಾಪಂ ಸದಸ್ಯ ಮುದುಕಪ್ಪ ಹೊಸಪೇಟೆ, ತಾಪಂ ಮಾಜಿ ಸದಸ್ಯ ಯೂಸುಫಸಾಬ ಬಾವಿಕಟ್ಟಿ ಹಾಜರಿದ್ದರು. ಗ್ರಾಪಂ ಸದಸ್ಯರಾದ ಪ್ರಕಾಶ ಕಣ್ಣಮ್ಮನವರ, ನಾಗನಗೌಡ ಪಾಟೀಲ, ಶಂಕರ ಮಡಿವಾಳರ, ನಿಂಗನಗೌಡ ಯಕ್ಕಿಕೊಪ್ಪ, ಈಶ್ವರನ್ನ ಅಂಗಡಿ, ಮಕಬೂಲ್ಸಾಬ ಕುನ್ನೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

