ಶುಷ್ಕ ದಿನ ಇಲ್ಲ!
ಹಾವೇರಿ: ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಆ. 22ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆ ವೇಳೆ ಈ ಬಾರಿ ಶುಷ್ಕ ದಿನವಿಲ್ಲ.
ಚುನಾವಣಾ ಆಯೋಗದಿಂದ ಈ ಸಲ ಮದ್ಯ ಮಾರಾಟ, ಮದ್ಯಪಾನ ನಿಷೇಧಿಸುವ ಬಗ್ಗೆ ಯಾವುದೇ ಸೂಚನೆ ಬಂದಿಲ್ಲ. ಹೀಗಾಗಿ ಮದ್ಯಪಾನ ನಿಷೇಧಿಸಿಲ್ಲ. ಈ ಬಗ್ಗೆ ಆಯೋಗವನ್ನು ಕೇಳಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಈ ಚುನಾವಣೆಯಲ್ಲಿ ನಕಾರಾತ್ಮಕ ಮತದಾನಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಈವರೆಗೆ ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿಲ್ಲ ಎಂದು ಎಸ್ಪಿ ಎನ್. ಶಶಿಕುಮಾರ ತಿಳಿಸಿದರು.
ಭದ್ರತೆ..ವ್ಯವಸ್ಥಿತ ಹಾಗೂ ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದೆ. ಎಸ್ಪಿ, ಇಬ್ಬರು ಎಎಸ್ಪಿ, ಮೂವರು ಡಿಎಸ್ಪಿ, 5 ಸಿಪಿಐ, 11 ಎಎಸ್‌ಐ, 30 ಪಿಎಸ್‌ಐ, 540 ಪೇದೆಗಳು ಹಾಗೂ 12 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಬಂದೋಬಸ್ತ್‌ನಲ್ಲಿ ಪಾಲ್ಗೊಳ್ಳಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

