ಹಾನಗಲ್ಲ: ಮತದಾನಕ್ಕೆ ಸಿದ್ಧತೆ
ಹಾನಗಲ್ಲ: ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆ. 22ರಂದು ನಡೆಯಲಿರುವ ಚುನಾವಣೆಯ ಮತದಾನಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ಡಾ ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.
ತಾಲೂಕಿನಲ್ಲಿ ಒಟ್ಟು 572 ಮತದಾರರಿದ್ದು, ಇವರ ಮತದಾನಕ್ಕಾಗಿ 40 ಗ್ರಾಪಂ ಕಾರ್ಯಾಲಗಳಲ್ಲಿ ಹಾಗೂ ಹಾನಗಲ್ಲ ತಾಪಂ ಕಾರ್ಯಾಲಯ - ಹೀಗೆ ಒಟ್ಟು 41 ಮತಗಟ್ಟೆ ತೆರೆಯಲಾಗಿದೆ.
ಚುನಾವಣೆಯ ಉಸ್ತುವಾರಿಗಾಗಿ ಪ್ರತಿ 10 ಮತಗಟ್ಟೆಗಳಿಗೆ ಒಬ್ಬರಂತೆ ನಾಲ್ವರು ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಎಲ್ಲ ಸಿಬ್ಬಂದಿಗೆ ಚುನಾವಣಾ ತರಬೇತಿ ನೀಡಲಾಗಿದೆ.
ಗ್ರಾಪಂ ಸದಸ್ಯರು ಆಯಾ ಗ್ರಾಪಂಗಳಲ್ಲಿರುವ ಮತಗಟ್ಟೆಗಳಲ್ಲಿ ಮತ ಚಲಾಯಿಸಲಿದ್ದಾರೆ. ತಾಪಂ ಮತ್ತು ಪುರಸಭೆ ಸದಸ್ಯರು ಹಾನಗಲ್ಲ ತಾಪಂ ಸಭಾಭವನದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸುವರು.
ಆ. 21ರಂದು ಮತದಾನದ ಪರಿಕರಗಳ ವಿತರಣೆ ಮತ್ತು ತಯಾರಿ ನಡೆಸಿ, 22ರಂದು ಪರಿಕರ ಮರಳಿ ಪಡೆಯಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

