ಹಾವೇರಿ

ಹಗರಣಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ

Published On :

ಬ್ಯಾಡಗಿ: ಇತ್ತೀಚಿನ ಕೆಲವು ಹಗರಣಗಳು ಹಾಗೂ ಅವುಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಕಾರ್ಯವೈಖರಿ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುತ್ತಿವೆ ಎಂದು ಬಿಆರ್‌ಇ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಿ.ಸಿ. ಪ್ರಭುಗೌಡ್ರ ಆತಂಕ ವ್ಯಕ್ತಪಡಿಸಿದರು.
ಮೋಟೆಬೆನ್ನೂರಿನ ಸಿಆರ್‌ಬಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಸತ್ತು ಹಾಗೂ ಎನ್ನೆಸ್ಸೆಸ್ ಘಟಕ ಉದ್ಘಾಟಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆ, ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದವರೇ ಅದಕ್ಕೆ ಕುಂದುಂಟಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಇದರಿಂದಾಗಿ ಮುಂದೆ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ಬಂದರೂ ಆಶ್ಚರ್ಯವಿಲ್ಲ. ಅಭಿವೃದ್ಧಿ ಚರ್ಚೆ ಆಗಬೇಕಾದಲ್ಲಿ ಹಗರಣಗಳು ಕೋಲಾಹಲ ಮಾಡುತ್ತಿವೆ. ದೇಶ ಕಾಯುವ ಸೈನಿಕ, ಅನ್ನ ನೀಡುವ ರೈತನಂತೆ ಕಾಯಕ ನಿಷ್ಠೆ ಎಲ್ಲರಲ್ಲೂ ಬರಬೇಕು ಎಂದರು.
ಬಿ.ಎಸ್. ಚಿನ್ನಿಕಟ್ಟಿ ಪ್ರಮಾಣವಚನ ಬೋಧಿಸಿದರು. ಎಂ.ಎ. ಮುಲ್ಲಾ, ಗುರುಪ್ರಕಾಶ ಇದ್ದರು. ಶೃಕಿ ಕುಮ್ಮಣ್ಣನವರ ಹಾಗೂ ಸಂಗಡಿಗರು ಪ್ರಾರ್ಥಿಸಿದರು, ಎನ್ನೆಸ್ಸೆಸ್ ಅಧಿಕಾರಿ ಕೆ.ಪಿ. ಬ್ಯಾಡಗಿ ಸ್ವಾಗತಿಸಿದರು. ಉಪನ್ಯಾಸಕ ಎ.ಬಿ. ಹಣಗಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.