ಹಾವೇರಿ

ರೈತರಿಗೆ ಹೈನುಗಾರಿಕೆ ಲಾಭದಾಯಕ: ಡಾ. ಗೋಪಿನಾಥ

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಆ. 22
ರೈತರು ತಮ್ಮ ನಿತ್ಯದ ದುಡಿಮೆಯ ಜತೆಯಲ್ಲಿ ಹೈನುಗಾರಿಕೆಯನ್ನೂ ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ ಡಾ೤ ಗೋಪಿನಾಥ ಮನವಿ ಮಾಡಿದರು.
ತಾಲೂಕಿನ ಕೋಡ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಏರ್ಪಡಿಸಿದ ರೈತರಿಗಾಗಿ ಹೈನುಗಾರಿಕೆ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದ ಅವರು, ಹೈನುಗಾರಿಕೆಯಲ್ಲಿ ಲಾಭ ಪಡೆಯಬೇಕಾದರೆ ಹುಟ್ಟಿದ ಕರುಗಳನ್ನು ಸರಿಯಾಗಿ ಲಾಲನೆ -ಪಾಲನೆ ಮಾಡಿ, ಉತ್ತಮ ಆಹಾರ ನೀಡಿ ಬೆಳೆಸಬೇಕು. ಇಂದಿನ ಕರು ನಾಳಿನ ಉತ್ತಮವಾದ ಹಸು ಎಂಬುದನ್ನು ತಿಳಿದು ಹಸುಗಳ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿಕೊಡಬೇಕು ಎಂದರು. ಹಸುಗಳಿಗೆ ಬರುವ ರೋಗಗಳು, ಅವುಗಳ ಹತೋಟಿ ಕ್ರಮಗಳು, ಹೈನುಗಾರಿಕೆಯಲ್ಲಿ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ, ಜಾನುವಾರು ವಿಮೆ, ಕಾಲುಬಾಯಿ ಬೇನೆಯ ಲಸಿಕಾ ಕ್ರಮದ ಬಗ್ಗೆ ವಿವರಿಸಿದರು.
ಕಾರ್ಯಾಗಾರದಲ್ಲಿ ಕೋಡ ಕ್ಷೇತ್ರದ ಪಶು ವೈದ್ಯಾಧಿಕಾರಿ ಆರ್.ಎಸ್. ಬೇವಿನಹಳ್ಳಿ, ಹಾಲು ಉತ್ಪಾದಕ ಸಂಘದ ಅಧ್ಯಕ್ಷ ಎಸ್.ಸಿ. ಕಬ್ಬಕ್ಕಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕ ಅಣ್ಣಪ್ಪ ಆರ್., ಕೋಡ ಸಂಘದ ಮೇಲ್ವಿಚಾರಕ ಶಿವಾನಂದ ಎಸ್. ಹಾಗೂ ಗ್ರಾಮದ ಹಾಲು ಉತ್ಪಾದಕರ ಸಂಘದ ಸದಸ್ಯರು, ಯೋಜನೆಯ ಸ್ವಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.