ಹಾವೇರಿ

ಕದರಮಂಡಲಗಿ ಬೀರೇಶ್ವರ ದೇವರ ಪಲ್ಲಕ್ಕಿ ಉತ್ಸವ

Published On :

ಬ್ಯಾಡಗಿ: ಧಾರ್ಮಿಕ ಆಚರಣೆಗಳನ್ನು ನಿರಂತರವಾಗಿ ನಡೆಸುತ್ತ ದೇವರ ಮೇಲಿನ ನಂಬಿಕೆ ಜೀವಂತವಾಗಿಡುವಂತೆ ತಾಪಂ ಸದಸ್ಯ ಮಲ್ಲಿಕಾರ್ಜುನ ಕರಲಿಂಗಪ್ಪನವರ ಕರೆ ನೀಡಿದರು. ಗುರುವಾರ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ಶ್ರೀ ಬೀರೇಶ್ವರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ಧಾರ್ಮಿಕ ಆಚರಣೆಗಳ ಬಗ್ಗೆ ಅಪಾರ ಗೌರವ ತೋರುತ್ತಾ ಬಂದಿದ್ದಾರೆ. ಸಮಾಜವನ್ನು ಒಗ್ಗೂಡಿಸಲು ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಜನರಲ್ಲಿ ಸನ್ಮಾರ್ಗ, ಸನ್ನಡತೆ, ಪ್ರೀತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಯವಪೀಳಿಗೆ ಸನಾತನ ಕಾಲದಿಂದಲೂ ಪ್ರಚಲಿತದಲ್ಲಿರುವ ಧಾರ್ಮಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ನಿರಾಸಕ್ತಿ ತೋರುತ್ತಿದೆ. ದೇವರ ಮೇಲಿನ ನಂಬಿಕೆಗೆ ಹಿನ್ನಡೆಯಾಗುತ್ತಿದ್ದು, ನಾಸ್ತಿಕ ಸಂಸ್ಕೃತಿ ನಿರ್ಮಾಣವಾಗುತ್ತಿದೆ ಎಂದರು.
ಪಲ್ಲಕ್ಕಿಯನ್ನು ಸಂಭ್ರಮದಿಂದ ಮೆರವಣಿಗೆ ಮಾಡಲಾಯಿತು. ಯುವಕರ ಡೊಳ್ಳಿನ ಮೇಳ ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು. ನಿಂಗಪ್ಪ ಛತ್ರದ, ನಿಂಗಪ್ಪ ಗುಮ್ಮನಹಳ್ಳಿ, ಬೀರಪ್ಪ ಕಿಚಡಿ, ಮಂಜಪ್ಪ ದೊಡ್ಡಬೂದಿಹಾಳ, ಸಣ್ಣನಿಂಗಪ್ಪ ಹೂಲಿಹಳ್ಳಿ, ವೀರಪ್ಪ ಕುಮ್ಮೂರು ನೇತೃತ್ವ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.