ಕಾಂಗ್ರೆಸ್ ಸೋಲಿಸಲು ಮೈತ್ರಿ: ಬೊಮ್ಮಾಯಿ
ಹಾವೇರಿ: ಜನವಿರೋಧಿ ನೀತಿ ಕೈಗೊಳ್ಳುತ್ತಿರುವ ಕಾಂಗ್ರೆಸ್ ಪಕ್ಷವನ್ನು ಸೋಲಿಸಬೇಕೆಂಬ ಉದ್ದೇಶದಿಂದ ಪ್ರತಿಪಕ್ಷಗಳು ಪ್ರಸಕ್ತ ಲೋಕಸಭೆ ಹಾಗೂ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿವೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾಂವಿ ತಾಲೂಕು ಪಂಚಾಯತಿಯಲ್ಲಿ ಗುರುವಾರ ಬೆಳಗ್ಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಿಜೆಪಿ ಹಾಗೂ ಕೆಜೆಪಿ ಜಂಟಿಯಾಗಿ ಅವಿಭಜಿತ ಧಾರವಾಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರ ಗೆಲುವಿಗೆ ಶ್ರಮಿಸಿದ್ದೇವೆ. ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇವೆ. ಮೂರು ತಿಂಗಳ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಜನವಿರೋಧಿ ನೀತಿಗಳು ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಿ ಪರಿಣಮಿಸಲಿವೆ. ಈ ಕಾಂಗ್ರೆಸ್ಸೇತೇರ ಮೈತ್ರಿ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದೂ ಬೊಮ್ಮಾಯಿ ಅಭಿಪ್ರಾಯಪಟ್ಟರು. ಕೆಜೆಪಿ ಹಾಗೂ ಬಿಜೆಪಿಯ ಹಿರಿಯ ನಾಯಕರು ಮುಂಬರುವ ದಿನಗಳಲ್ಲಿಯೂ ಒಗ್ಗಟ್ಟಾಗಿ ಚುನಾವಣೆಗಳನ್ನು ಎದುರಿಸುವುದಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದು, ಅದು ಫಲಪ್ರದವಾಗಲಿದೆ ಎಂಬ ಆಶೆ ಹೊಂದಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

