ನಾಳೆ ನವಸಾಕ್ಷರ ಮೌಲ್ಯಮಾಪನ
ಹಾವೇರಿ: ಸಾಕ್ಷರ ಭಾರತ್ನಡಿ ನಿರ್ದಿಷ್ಟ ಕಲಿಕೆಮುಗಿಸಿದ ನವಸಾಕ್ಷರರಿಗೆ ಪ್ರತಿ ವರ್ಷ ಮಾರ್ಚ್, ಆಗಸ್ಟ್ ತಿಂಗಳಲ್ಲಿ ಮೌಲ್ಯಮಾಪನ ನಡೆಸಿ ಸರ್ಟಿಫಿಕೇಟ್ ನೀಡಲಾಗುವುದು. ರಾಷ್ಟ್ರೀಯ ಸಾಕ್ಷರತಾ ಮಿಷನ್, ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್ಐಓಎಸ್) ನವದೆಹಲಿ ಜಂಟಿಯಾಗಿ ನಡೆಸುವ ಈ ಮೌಲ್ಯಮಾಪನ ಆ. 25ರಂದು ದೇಶದ 19 ರಾಜ್ಯಗಳಲ್ಲಿ ಜರುಗಲಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ 208 ಗ್ರಾಪಂನ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಜರುಗಲಿದ್ದು, ಜಿಲ್ಲೆಯಲ್ಲಿ 7000 ಜನ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಅಧೀಕ್ಷಕರಾಗಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರು, ವೀಕ್ಷಕರಾಗಿ ಸಹಶಿಕ್ಷಕರು, ಮೇಲ್ವಿಚಾರಕರಾಗಿ ಪ್ರೇರಕರು ಕಾರ್ಯನಿರ್ವಹಿಸುವರು. ಪರೀಕ್ಷಾರ್ಥಿಗಳಿಗೆ ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಲಾಗುತ್ತಿದ್ದು, ನವಸಾಕ್ಷರರು ಆಯಾ ಗಾಪಂನ ಪ್ರೇರಕರು, ಸ್ವಯಂ ಸೇವಕರನ್ನು ಸಂಪರ್ಕಿಸಲು ತಿಳಿಸಿದೆ. ಈ ಪರೀಕ್ಷೆಉಸ್ತುವಾರಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ, ಗ್ರಾಪಂ ಅಭಿವೃದ್ಧಿ ಯೋಜನಾಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಎನ್.ಐ.ಓ.ಎಸ್. ಪರೀಕ್ಷಾ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ಹಾಗೂ ಬೆಂಗಳೂರು ಲೋಕ ಶಿಕ್ಷಣ ನಿರ್ದೇಶನಾಲಯದ ಅಧಿಕಾರಿಗಳು, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಂಯೋಜಕರು ಪರಿವೀಕ್ಷಣೆ ನಡೆಸಲಿದ್ದಾರೆ. ಪರೀಕ್ಷೆಗೆ ಬೇಕಾದ ಸಿದ್ಧತೆಗಳನ್ನು ಎಲ್ಲ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಲೋಕ ಶಿಕ್ಷಣ ಸಮಿತಿಗಳು ಮಾಡಿಕೊಂಡು ಯಾವುದೇ ಲೋಪದೋಷವಿಲ್ಲದಂತೆ ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

