ಹಾವೇರಿ

ಅಪವಿತ್ರ ಮೈತ್ರಿಗೆ ತಕ್ಕ ಉತ್ತರ

Published On :

ಬ್ಯಾಡಗಿ: ಕಾಂಗ್ರೆಸ್ ಗೆಲ್ಲಿಸುವ ಮೂಲಕ ಅಪವಿತ್ರ ಮೈತ್ರಿ ಮಾಡಿಕೊಂಡ ಜೆಡಿಎಸ್‌ಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ತಾಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಹುಸೇನಸಾಬ್ ದೊಡ್ಮನಿ ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಹಾಗೂ ಡಿ.ಕೆ. ಸುರೇಶ್ ವಿಜಯದ ಹಿನ್ನೆಲೆಯಲ್ಲಿ ಪಟ್ಟಣದ ಹಳೇ ಪುರಸಭೆ ಎದುರಿಗೆ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ವಿಜಯೋತ್ಸವ ಉದ್ದೇಶಿಸಿ ಅವರು ಮಾತನಾಡಿದರು. ಶತಾಯಗತಾಯ ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಕೋಮುವಾದಿ ಬಿಜೆಪಿ ಜತೆ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿತ್ತು. ಪ್ರಬುದ್ಧ ಮತದಾರರು ಕಾಂಗ್ರೆಸ್ ಗೆಲ್ಲಿಸುವ ಮೂಲಕ ಉತ್ತರಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಯೋಜನೆಗಳಾದ ರು. 1ಕ್ಕೆ ಕೆಜಿ ಅಕ್ಕಿ, ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಹಾಗೂ ಹಿಂದುಳಿದ ಮತ್ತು ಪ.ಜಾತಿ ಜನಾಂಗದ ಜನರ ಸಾಲ ಮನ್ನಾ ಮುಂತಾದ ಕಾರ್ಯಕ್ರಮಗಳೇ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ ತಂದುಕೊಟ್ಟಿವೆ ಎಂದರು.
ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕಾರ್ಯದರ್ಶಿ ರಮೇಶ ಸುತ್ತಕೋಟಿ, ರುದ್ರಪ್ಪ ಹೊಂಕಣ. ದುರ್ಗೇಶ ಗೋಣೆಮ್ಮನವರ, ನಜೀರ ಅಹ್ಮದ್‌ಶೇಖ, ಮಂಜುನಾಥ ಬೋವಿ, ಬಣಕಾರ, ಮಜೀದ್‌ಸಾಬ ಮುಲ್ಲಾ, ಹುಚ್ಚನಗೌಡ ಲಿಂಗನಗೌಡ್ರ, ಚನ್ನಗೌಡ್ರ, ಕೇಶವ ಕಿತ್ತೂರು, ಪರಮೇಶ ಚಿಕ್ಕಳ್ಳಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.