ಶಿಕ್ಷಣಕ್ಕೆ ಶೇ. 6 ಹಣ ಮೀಸಲಿಡಿ: ಎಸ್‌ಎಫ್‌ಐ
ಕನ್ನಡಪ್ರಭ ವಾರ್ತೆ, ಹಾವೇರಿ, ಆ. 24
ಶಿಕ್ಷಣದ ಉಳಿವಿಗಾಗಿ ದೇಶದ ಒಟ್ಟು ರಾಷ್ಟ್ರೀಯ ಉತ್ಪನ್ನದ ಶೇ. 6ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಭಾರತ ವಿದ್ಯಾರ್ಥಿ ಫೆಡರೇಶನ್ ಶನಿವಾರ ನಗರದಲ್ಲಿ ಸಹಿ ಸಂಗ್ರಹ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಎಸ್‌ಎಫ್‌ಐ ಸೆ. 10ರಂದು ಹಮ್ಮಿಕೊಂಡಿರುವ ಪಾರ್ಲಿಮೆಂಟ್ ಚಲೋ ಕಾರ್ಯಕ್ರಮದ ಒಂದು ಭಾಗವಾಗಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಈ ಕಾರ್ಯಕ್ರಮ ಆಯೋಜಿಸಿತ್ತು.
ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವ ಶಿಕ್ಷಣದ ಕೇಂದ್ರೀಕರಣ ಹಾಗೂ ವ್ಯಾಪಾರೀಕರಣ ನೀತಿಗಳನ್ನು ಕೈಬಿಡಬೇಕು. ಕರ್ನಾಟಕದಲ್ಲಿ 22 ಖಾಸಗಿ ವಿಶ್ವವಿದ್ಯಾಲಯಗಳಿಗೆ ನೀಡಿರುವ ಅನುಮತಿ ರದ್ದುಗೊಳಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿ, ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು.
ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಿ ಹಾಗೂ ವಿದ್ಯಾರ್ಥಿ ಸಂಘಗಳಿಗೆ ಚುನಾವಣೆಗಳನ್ನು ನಡೆಸಬೇಕು ಮುಂತಾದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಎಫ್‌ಐ ಪಾರ್ಲಿಮೆಂಟ್ ಚಲೋ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ.
ಸಹಿ ಸಂಗ್ರಹ ಕಾರ್ಯಕ್ರಮ ಉದ್ಘಾಟಿಸಿದ ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ನಾರಾಯಣ ಕಾಳೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಕಡೆಗಣಿಸಿದ ಜಗತ್ತಿನ ಯಾವುದೇ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಇಂದು ಹಣ ಉಳ್ಳವರಿಗೆ ಮಾತ್ರ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಬಡವಿದ್ಯಾರ್ಥಿಗಳಿಗೆ ಅದು ಗಗನ ಕುಸುಮವಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಹಾರ, ಈ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸೆ. 5ರ ವರೆಗೆ ಎಲ್ಲ ಕಾಲೇಜುಗಳಲ್ಲಿ ನಡೆಯಲಿದೆ ಎಂದರು. ಶಶಿಧರ ನಿರೂಪಿಸಿದರು. ರವಿ ಸಾಲಿ ಸ್ವಾಗತಿಸಿದರು. ಮಾಲತೇಶ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

