ಹಾನಗಲ್ಲ: ವಿಜಯೋತ್ಸವ
ಹಾನಗಲ್ಲ: ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಚಿತ್ರನಟಿ ರಮ್ಯಾ ಹಾಗೂ ಡಿ.ಕೆ. ಸುರೇಶ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಅಕ್ಕಿಆಲೂರು ಪಟ್ಟಣದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು, ಮುಖಂಡರು ವಿಶೇಷ ಪೂಜೆ ಸಲ್ಲಿಸಿ, ವಿಜಯೋತ್ಸವ ಆಚರಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಜನಪರ ಯೋಜನೆ ಅನುಷ್ಠಾನಗೊಳಿಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ನೀಡಿರುವ ಭರವಸೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ ಹಾಗೂ ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಯಶಸ್ವಿಯಾಗಿ ನೂರು ದಿನ ಪೂರೈಸಿದೆ. ಜನರ ವಿಶ್ವಾಸ ಸಂಪಾದಿಸಿದೆ. ಈ ಕಾರಣ ಎರಡೂ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ವಿಜಯೋತ್ಸವದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ 50 ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಕಾಂಗ್ರೆಸ್ ಮುಖಂಡರಾದ ರಾಜಣ್ಣ ಹಿರೇಮಠ, ಸುರೇಶ ದೊಡ್ಡಕುರುಬರ, ಬಸನಗೌಡ ಪಾಟೀಲ, ಜಿ.ಎಸ್. ದೇಶಪಾಂಡೆ, ಮಾಲತೇಶ ತಿಪ್ಪಿಗುಂಡಿ, ಕಲ್ಲಾಪುರ ಗ್ರಾಪಂ ಅಧ್ಯಕ್ಷ ಅರವಿಂದ ಆರೇರ, ಮಾಲತೇಶ ವಾಲಿಕಾರ, ಸಿದ್ದನಗೌಡ ಪಾಟೀಲ, ಸುರೇಶ ಮುಸರಿ, ರಫೀಕಸಾಬ ಹಿತ್ತಲಮನಿ, ಪರಶುರಾಮ್ ಡೂಗನವರ, ಮಂಜುನಾಥ ತಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

