ಹಾವೇರಿ

ಛಬ್ಬಿ ಗೆಲವು: ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Published On :

ಹಾನಗಲ್ಲ: ಧಾರವಾಡ ಕ್ಷೇತ್ರದಿಂದ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಗರಾಜ್ ಛಬ್ಬಿ ಜಯಿಸಿರುವುದಕ್ಕೆ ಹಾನಗಲ್ಲ ತಾಲೂಕಿನ ಅಕ್ಕಿಆಲೂರು ಗ್ರಾಮದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ವಿಜಯೋತ್ಸವದ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ನೂರುದಿನದಲ್ಲಿಯೇ ಮಹತ್ವದ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿ ವಿಧಾನ ಪರಿಷತ್ ಹಾಗೂ ಲೋಕಸಭಾ ಸ್ಥಾನಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಮತದಾರರು ಬೆಂಬಲಿಸಿದ್ದರೆ. ಕಾಂಗ್ರೆಸ್ ಆಡಳಿತದಿಂದ ಮಾತ್ರ ಉತ್ತಮ ಸರ್ಕಾರ ನೀಡಲು ಸಾಧ್ಯ ಎಂಬುದು ಸಾಬೀತಾಗಿದೆ. ಮುಂದಿನ ಎಲ್ಲ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಮುಖಂಡರಾದ ಬಸವರಾಜ ನರೇಂದ್ರ, ಗಿರೀಶಗೌಡ ಪಾಟೀಲ, ಹನುಮಂತಪ್ಪ ಕೋಣಕೊಪ್ಪ, ಬಸನಗೌಡ ಸುಂಕದ, ರಾಜಣ್ಣ ಹಿರೇಮಠ, ಸುರೇಶ ದೊಡ್ಡಕುರುಬರ, ಬಸನಗೌಡ ಪಾಟೀಲ, ಜಿ.ಎಸ್. ದೇಶಪಾಂಡೆ, ಮಾಲತೇಶ ತಿಪ್ಪಿಗುಂಡಿ, ಮಾಲತೇಶ ವಾಲಿಕಾರ, ಸಿದ್ದನಗೌಡ ಪಾಟೀಲ, ಸುರೇಶ ಮುಸರಿ, ರಫೀಕಸಾಬ ಹಿತ್ತಲಮನಿ, ಪರಶುರಾಮ ಡೂಗನವರ ಮುಂತಾದವರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.