ಹಾವೇರಿ

ಬಾಕಿ ಹಣ ಪಾವತಿಸದ ಕಾರ್ಖಾನೆ ವಿರುದ್ಧ ಕ್ರಮ

Published On :

ಹಾವೇರಿ: ರೈತರ ಕಬ್ಬಿನ ಬಾಕಿ ಹಣ ಪಾವತಿಸದ ರಾಜ್ಯದ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಸಕ್ಕರೆ, ಮುಜರಾಯಿ, ಸಣ್ಣ ಕೈಗಾರಿಕೆ ಸಚಿವ ಪ್ರಕಾಶ ಹುಕ್ಕೇರಿ ಎಚ್ಚರಿಸಿದ್ದಾರೆ. ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸರ್ಕಾರದ ನೂರು ದಿನ ನೂರಾರು ನಿರ್ಣಯ ಎಂಬ ಕಿರು ಹೊತ್ತಿಗೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ರೈತರ ರು. 200 ಕೋಟಿ ಕಬ್ಬು ಖರೀದಿಸಿದ ಬಾಕಿ ಇರಿಸಿಕೊಂಡಿವೆ. ಕಾರ್ಖಾನೆಗಳ ಆಡಳಿತ ಮಂಡಳಿಗಳು ಈ ಬಾಕಿ ಹಣವನ್ನು ಆಗಸ್ಟ್ ತಿಂಗಳೊಳಗೆ ಪಾವತಿಸಬೇಕು ಎಂದೂ ಸಚಿವರು ಕಟ್ಟಪ್ಪಣೆ ಮಾಡಿದರು. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆಗಳ ಆರಂಭಕ್ಕೆ ಅವಕಾಶ ನೀಡುವುದಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಮಾಲೀಕರು ನಿಗದಿತ ಗಡುವಿನೊಳಗೆ ರೈತರ ಬಾಕಿ ಪಾವತಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಪಡಿತರರಿಗೆ ಬೆಲ್ಲ: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿಯೊಂದು ಕುಟುಂಬಕ್ಕೆ 2 ಕೆಜಿ ಬೆಲ್ಲವನ್ನೂ ವಿತರಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಬೆಲ್ಲ ವಿತರಿಸುವ ಕುರಿತಾದ ಪ್ರಸ್ತಾವನೆ ಸಿಎಂ ಸಿದ್ದರಾಮಯ್ಯ ಅವರ ಮುಂದಿಡಲಾಗಿದೆ. ಆದಷ್ಟು ಶೀಫ್ರದಲ್ಲೇ ಬಡ ಕುಟುಂಬಗಳಿಗೆ ಬೆಲ್ಲ ವಿತರಿಸಲಾಗುವುದು ಎಂದರು. ಸಚಿವ ದಿನೇಶ ಗುಂಡೂರಾವ್ ಅವರೂ ಸಮ್ಮತಿ ವ್ಯಕ್ತಪಡಿಸಿದ್ದಾರಲ್ಲದೆ ಈ ಕುರಿತಂತೆ ಸಿಎಂ ಅವರೊಟ್ಟಿಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.